Govt of India final notice to Twitter : ಕೇಂದ್ರ ಸರ್ಕಾರದಿಂದ ಟ್ವಿಟ್ಟರ್ ಗೆ ಫೈನಲ್ ನೋಟಿಸ್..!

ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಈಗ ಕಾಲಾವಕಾಶ ಮುಕ್ತಾಯಗೊಂಡಿದೆ. ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ.

Last Updated : Jun 5, 2021, 02:35 PM IST
  • ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆ
  • ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ
  • ಕೇಂದ್ರ ಸರ್ಕಾರದ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಅಂತಿಮ ಸೂಚನೆ
Govt of India final notice to Twitter : ಕೇಂದ್ರ ಸರ್ಕಾರದಿಂದ ಟ್ವಿಟ್ಟರ್ ಗೆ ಫೈನಲ್ ನೋಟಿಸ್..! title=

ನವದೆಹಲಿ : ಕೇಂದ್ರ ಸರ್ಕಾರದಿಂದ ಹೊಸ ಐಟಿ ನಿಯಮಗಳನ್ನು ರೂಪಿಸಿ ಅಧಿಸೂಚನೆಯನ್ನು ಹೊರಡಿಸಿತ್ತು. ಅದಕ್ಕೆ ಮೇ.15ರವರೆಗೆ ಆಕ್ಷೇಪಣೆಗೆ ಕಾಲಾವಕಾಶ ಕೂಡ ನೀಡಲಾಗಿತ್ತು. ಈಗ ಕಾಲಾವಕಾಶ ಮುಕ್ತಾಯಗೊಂಡಿದೆ. ಈಗಾಗಲೇ ವಾಟ್ಸ್ ಆಪ್ ಸೇರಿದಂತೆ ಅನೇಕ ಸೋಷಿಯಲ್ ಮೀಡಿಯಾಗಳಿಗೆ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದ್ದಂತ ಕೇಂದ್ರ ಸರ್ಕಾರ, ಈಗ ಟ್ವಿಟ್ಟರ್ ಗೆ ಅಂತಿಮ ಸೂಚನೆ ನೀಡಿದೆ.

ಈ ಕುರಿತಂತೆ ಕೇಂದ್ರ ಸರ್ಕಾರ ಮುಖ್ಯ ಅನುಸರಣಾ ಅಧಿಕಾರಿಯವರು ವಿವರಗಳನ್ನು ಒಳಗೊಂಡಂತ ಹೊಸ ಐಟಿ ನಿಯಮಗಳ್ನು ಪಾಲಿಸುವ ಪತ್ರ ಬರೆದಿದ್ದು, ಕೇಂದ್ರ ಸರ್ಕಾರ(Government of India)ದ ಹೊಸ ಐಟಿ ನಿಯಮಗಳನ್ನು ಪಾಲಿಸುವಂತೆ ಅಂತಿಮ ಸೂಚನೆಯನ್ನು ಪತ್ರದ ಮೂಲಕ ತಿಳಿಸಿದೆ.

ಇದನ್ನೂ ಓದಿ : Twitter Blue Tick : ಉಪರಾಷ್ಟ್ರಪತಿ ಬೆನ್ನಲ್ಲೇ RSS ಪ್ರಮುಖ ನಾಯಕರ ಟ್ವಿಟ್ ಖಾತೆ 'ಬ್ಲೂ ಟಿಕ್' ರದ್ದು

ಅಂದಹಾಗೇ, ಇಂದು ಟ್ವಿಟ್ಟರ್ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು(Venkaiah Naidu) ವೈಯಕ್ತಿಕ ಟ್ವಿಟ್ಟರ್ ಖಾತೆಯ ಬ್ಲೂ ಟಿಕ್ ರದ್ದು ಪಡಿಸಿ ವಿವಾದಕ್ಕೂ ಗುರಿಯಾಗಿತ್ತು. ಆ ನಂತ್ರ ಮರುಸ್ಥಾಪಿಸಿತ್ತು ಕೂಡ. ಇದಾದ ನಂತ್ರ ಈಗ RSS ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ವಿವಿಧ RSS ಮುಖಂಡರಿಗೆ ನೀಡಿದ್ದಂತ ಬ್ಲೂ ಟಿಕ್ ವೆರಿಫಿಕೇಷನ್ ಬ್ಯಾಡ್ಜ್ ಅನ್ನು ರದ್ದುಗೊಳಿಸಿ, RSS ಮುಖಂಡರ ಕೆಂಗಣ್ಣಿಗೆ ಗುರಿಯಾಗಿದೆ.

ಇದನ್ನೂ ಓದಿ : Realme: ಜಿಯೋಫೋನ್‌ಗೆ ಟಕ್ಕರ್ ನೀಡಲು ಮುಂದಾದ ರಿಯಲ್ಮೆ ಫೀಚರ್ ಫೋನ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News