ರಾಜಸ್ಥಾನದ ಝಲಾವರ್ನಲ್ಲಿ ಸರ್ಕಾರಿ ಶಾಲಾ ಕಟ್ಟಡವೊಂದು ಕುಸಿದಿದ್ದು ಈ ಭೀಕರ ಘಟನೆಯಲ್ಲಿ ನಾಲ್ಕು ಮಕ್ಕಳು ಪ್ರಾಣಕಳೆದುಕೊಂಡಿದ್ದಾರೆ. 17ಮಕ್ಕಳು ಗಾಯಗೊಂಡಿದ್ದಾರೆ. ಇವರಲ್ಲಿ ಕೆಲವು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

School building collapses in Rajasthan: ರಾಜಸ್ಥಾನದ ಝಲಾವರ್ನಲ್ಲಿರುವ ಸರ್ಕಾರಿ ಶಾಲೆಯೊಂದರ ಕಟ್ಟಡ ಕುಸಿದ ಪರಿಣಾಮ ನಾಲ್ಕು ಮಕ್ಕಳು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಈ ದುರಂತ ಘಟನೆಯಲ್ಲಿ ಸುಮಾರು 30-40 ಮಕ್ಕಳು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
VIDEO | Four children killed, 17 injured as government school building collapses in Rajasthan's Jhalawar district, say police. Visuals from the hospital where the injured children have been admitted.#RajasthanNews
(Source: Third Party)
(Full video available on PTI videos -… pic.twitter.com/HZ7L81Z0ix
— Press Trust of India (@PTI_News) July 25, 2025
ಲಭ್ಯವಿರುವ ಮಾಹಿತಿಗಳ ಪ್ರಕಾರ, ಜಿಲ್ಲೆಯ ಮನೋಹರ್ತಾನ ಬ್ಲಾಕ್ನ ಪೀಪ್ಲೋಡಿ ಸರ್ಕಾರಿ ಶಾಲೆಯಲ್ಲಿ ಮಕ್ಕಳು ತರಗತಿಗಳಿಗೆ ತೆರಳುಟ್ಟಿದ್ದರು. ಈ ಸಂದರ್ಭದಲ್ಲಿ ಶಾಲಾ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ನಾಲ್ಕು ಮಕ್ಕಳ ಧಾರುಣ ಸಾವು: ಮೂರ್ನಾಲ್ಕು ಮಕ್ಕಳ ಸ್ಥಿತಿ ಗಂಭೀರ:-
ರಾಜಸ್ಥಾನದ ಝಲಾವರ್ ಜಿಲ್ಲೆಯಲ್ಲಿ ಶುಕ್ರವಾರ (ಜುಲೈ 25, 2025) ಬೆಳಿಗ್ಗೆ ಸಂಭವಿಸಿರುವ ಈ ದುರಂತ ಘಟನೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಶಾಲಾ ಕಟ್ಟಡ ಕುಸಿತದಿಂದಾಗಿ ಅವಶೇಷಗಳಡಿ ಸಿಲುಕಿರುವ ಮಕ್ಕಳ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು ಇದುವರೆಗೂ 17ಮಕ್ಕಳನ್ನು ರಕ್ಷಿಸಲಾಗಿದೆ. ಇವರಲ್ಲಿ ಹತ್ತು ಮಕ್ಕಳನ್ನು ವೈದ್ಯಕೀಯ ಚಿಕಿತ್ಸೆಗಾಗಿ ಝಾಲಾವರ್ಗೆ ಕಳುಹಿಸಲಾಗಿದ್ದು, ಮೂರರಿಂದ ನಾಲ್ವರು ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಝಾಲಾವರ್ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಕುಮಾರ್ ಬುಡಾನಿಯಾ ಮಾಹಿತಿ ನೀಡಿದ್ದಾರೆ.
ಶಾಲಾ ಶಿಕ್ಷಕರು ಮತ್ತು ಸ್ಥಳೀಯರ ಸಹಾಯದಿಂದ ಮಕ್ಕಳನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.