ಈ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಂಗಾಪುರದಲ್ಲಿ ಸಿಗಲಿದೆ ಟ್ರೈನಿಂಗ್
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ಸಲುವಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಹತ್ವದ ಘೋಷಣೆ ಮಾಡಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಸಿಂಗಾಪುರಕ್ಕೆ ಕಳುಹಿಸುವುದಾಗಿ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸುವ ಅವಶ್ಯಕತೆ ಇದೆ. ಇದಕ್ಕಾಗಿ ಪಂಜಾಬ್ ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರನ್ನು ತರಬೇತಿಗಾಗಿ ಪಂಜಾಬ್ ರಾಜ್ಯಕ್ಕೆ ಕಳುಹಿಸಲಾಗುವುದು. ಫೆಬ್ರವರಿ 6 ರಿಂದ ಫೆಬ್ರವರಿ 10ರವರೆಗೆ ಸಿಂಗಾಪುರದಲ್ಲಿ ಸರ್ಕಾರಿ ಶಾಲಾ ಮುಖ್ಯಸ್ಥರಿಗೆ ತರಬೇತಿ ನೀಡಲಾಗುವುದು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ- UPSC 2023 : ಯುಪಿಎಸ್ಸಿಯಲ್ಲಿ 1105 ಹುದ್ದೆಗಳಿಗೆ ಅರ್ಜಿ : ಇಲ್ಲಿದೆ ಸಂಪೂರ್ಣ ಮಾಹಿತಿ
ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಭರವಸೆ:
ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಭರವಸೆಯೊಂದಿಗೆ ಆಮ್ ಆದ್ಮಿ ಪಕ್ಷ ಪಂಜಾಬ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷ ಹಗಲಿರುಳು ಶ್ರಮವಹಿಸಿ ದುಡಿಯುತ್ತಿದೆ ಎಂದು ಸಿಎಂ ಭಗವಂತ್ ಮಾನ್ ಹೇಳಿದರು.
ಇದನ್ನೂ ಓದಿ- ವಿಶಾಖಪಟ್ಟಣಂ ಆಂಧ್ರಪ್ರದೇಶದ ಹೊಸ ರಾಜಧಾನಿ
ಕೊನೆಗೊಳ್ಳಲಿದೆ ಶಿಕ್ಷಕರು ಮತ್ತು ಪೋಷಕರ ನಡುವಿನ ಅಂತರ:
ಇದೇ ಸಂದರ್ಭದಲ್ಲಿ ಶಿಕ್ಷಣ ಕ್ರಾಂತಿಯಾಗಬೇಕಾದರೆ ಎಲ್ಲಕ್ಕಿಂತ ಮೊದಲು ಶಿಕ್ಷಕರು ಮತ್ತು ಮಗುವಿನ ಪೋಷಕರ ನಡುವಿನ ಅಂತರ ಕೊನೆಗೊಳ್ಳುವ ಅಗತ್ಯವಿದೆ ಎಂಬುದನ್ನು ಒತ್ತಿ ಹೇಳಿದ ಸಿಎಂ ಭಗವಂತ್ ಮಾನ್, ಮಗು ಶಾಲೆಯಲ್ಲಿ ಯಾವ ರೀತಿ ಕಾರ್ಯನಿರ್ವಹಿಸುತ್ತಿದೆ ಎಂಬುದರ ಬಗ್ಗೆ ಪೋಷಕರಿಗೆ ಅರಿವಿರಬೇಕು. ಅಂತೆಯೇ, ಶಾಲೆಯ ನಂತರ ಮಗು ಯಾವ ಯಾವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತದೆ. ಪಠ್ಯೇತರ ಚಟುವಟಿಕೆಗಳಲ್ಲಿ ಮಗುವಿನ ಆಸಕ್ತಿಗಳ ಬಗ್ಗೆ ಶಿಕ್ಷಕರಿಗೂ ತಿಳಿದಿರುವುದು ಅತ್ಯಗತ್ಯವಾಗಿದೆ ಎಂದವರು ತಿಳಿಸಿದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.