ನವದೆಹಲಿ: ಶೀಘ್ರದಲ್ಲೇ ರಾಜ್ಯದಲ್ಲಿ ಸರ್ಕಾರ ರಚನೆಯಾಗಲಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. 



COMMERCIAL BREAK
SCROLL TO CONTINUE READING

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಕುರಿತು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿವಸೇನೆ ನಡುವೆ ನಡೆಯುತ್ತಿರುವ ಜಗಳದ ಮಧ್ಯೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೋಮವಾರ (ನವೆಂಬರ್ 4) ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾದರು.


ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಭೇಟಿಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ದೇವೇಂದ್ರ ಫಡ್ನವೀಸ್, "ಬೇರೆ ಯಾವುದೇ ಪಕ್ಷದ ಸರ್ಕಾರ ರಚನೆಯ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಆದರೆ ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ನನಗೆ ಸರ್ಕಾರ ರಚನೆಯಾಗುವ ಬಗ್ಗೆ ವಿಶ್ವಾಸವಿದೆ" ಎಂದು ಹೇಳಿದರು.



ದೇವೇಂದ್ರ ಫಡ್ನವೀಸ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಮಹಾರಾಷ್ಟ್ರದ ರೈತರ ಸಮಸ್ಯೆಗಳ ಕುರಿತು ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಕಾಲಿಕ ಮಳೆಯಿಂದ ರಾಜ್ಯದ ರೈತರು ಕಷ್ಟಕ್ಕೆ ಸಿಲುಕಿದ್ದು ಅವರಿಗೆ ಹೆಚ್ಚಿನ ಸಹಾಯವನ್ನು ನೀಡಬೇಕೆಂದು ಫಡ್ನವೀಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.