ಲಖನೌ: ಇತ್ತೀಚಿಗೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ವೀಡಿಯೋವನ್ನು ಬಿಡುಗಡೆ ಮಾಡಿರುವ ಕೇಂದ್ರದ ಮೋದಿ ಸರಕಾರ ಕ್ರಮವನ್ನು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ. 


COMMERCIAL BREAK
SCROLL TO CONTINUE READING

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019ರ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಜಿಕಲ್ ಸ್ಟ್ರೈಕ್ ವೀಡಿಯೋ ಬಿಡುಗಡೆ ಮಾಡಿದೆ ಎಂದು ಮಾಯಾವತಿ ಆರೋಪಿಸಿದರು. 


"ಒಂದು ವೇಳೆ ಅವರು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದಾಖಲೆ ಬಿಡುಗಡೆ ಮಾಡಲೇ ಬೇಕೆಂದಿದ್ದರೆ, ಸ್ಟ್ರೈಕ್ ನಡೆದ ಸಂದರ್ಭದಲ್ಲೇ ಏಕೆ ಬಿಡುಗಡೆ ಮಾಡಲಿಲ್ಲ? ಕೇಂದ್ರದ ಬಿಜೆಪಿ ಸರ್ಕಾರ ರಾಜಕೀಯ ಲಾಭಕ್ಕಾಗಿ ಈ ಕೆಲಸ ಮಾಡಿದೆ" ಎಂದು ಮಾಯಾವತಿ ಕಿಡಿ ಕಾರಿದರು. 


ಎರಡು ವರ್ಷದ ಕೆಳಗೆ ಅಂದರೆ 29 ಸೆಪ್ಟೆಂಬರ್ 2016ರಲ್ಲಿ ಕೇಂದ್ರ ಸರಕಾರ ಪಾಕಿಸ್ತಾನದ ನೆಲದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿತ್ತು. ಇದರ ವಿಡಿಯೋ ಬುಧವಾರ ರಾತ್ರಿ ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿತ್ತು.