ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ
ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನ ಮೇಲೆ 15 ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ನಂತರ ಅವರನ್ನು ಬಂಧಿಸಲಾಗಿದೆ.
ನವದೆಹಲಿ: ತಮಿಳುನಾಡಿನ ರಾಮನಾಥಪುರಂ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನ ಮೇಲೆ 15 ವಿದ್ಯಾರ್ಥಿಗಳು ಲೈಂಗಿಕ ಕಿರುಕುಳದ ಆರೋಪ ಹೊರಿಸಿದ ನಂತರ ಅವರನ್ನು ಬಂಧಿಸಲಾಗಿದೆ.
ಪೊಲೀಸರ ಪ್ರಕಾರ 9 ಮತ್ತು 10 ನೇ ತರಗತಿಯ ಕನಿಷ್ಠ 15 ವಿದ್ಯಾರ್ಥಿಗಳು ತಮ್ಮ ಶಾಲೆಯಲ್ಲಿ ಮಕ್ಕಳ ರಕ್ಷಣೆ ಕುರಿತು ಮಕ್ಕಳ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮವನ್ನು ನಡೆಸಿದ ನಂತರ ತಮ್ಮ ಸಂಕಷ್ಟವನ್ನು ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ : eKYC ಇಲ್ಲದೆ ಖಾತೆಗೆ ಬರುವುದಿಲ್ಲ ಪಿಎಂ ಕಿಸಾನ್ 10ನೇ ಕಂತು, ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಈ ರೀತಿ ಪರಿಶೀಲಿಸಿಕೊಳ್ಳಿ
ಕ್ರಮವಾಗಿ ಗಣಿತ ಮತ್ತು ಸಮಾಜ ವಿಜ್ಞಾನ ಬೋಧಿಸುವ ಇಬ್ಬರು ಶಿಕ್ಷಕರು ತರಗತಿಯಲ್ಲಿ ಡಬಲ್ ಮೀನಿಂಗ್ ಟೀಕೆಗಳನ್ನು ಮಾಡುತ್ತಿದ್ದರು,ಅನುಚಿತವಾಗಿ ಸ್ಪರ್ಶಿಸುತ್ತಿದ್ದರು ಮತ್ತು ಶಾಲಾ ಸಮಯದ ನಂತರ ಫೋನ್‌ಗಳಿಗೆ ಕರೆ ಮಾಡುತ್ತಿದ್ದರು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ : ಡಿಸೆಂಬರ್ 31 ರ ಮೊದಲು ಈ ಎಲ್ಲಾ ಕೆಲಸಗಳನ್ನು ಮಾಡಿ ಮುಗಿಸಿಕೊಳ್ಳಿ, ಇಲ್ಲವಾದರೆ ತಪ್ಪಿದ್ದಲ್ಲ ನಷ್ಟ
ವಿದ್ಯಾರ್ಥಿಗಳಿಂದ ದೂರು ಸ್ವೀಕರಿಸಿದ ಪೊಲೀಸರು ಸಮಾಜ ವಿಜ್ಞಾನ ಶಿಕ್ಷಕನನ್ನು ಬಂಧಿಸಿದ್ದು, ಎರಡನೇ ಆರೋಪಿ ಶಿಕ್ಷಕರಿಗಾಗಿ ಶೋಧ ನಡೆಸುತ್ತಿದ್ದಾರೆ.ವಿದ್ಯಾರ್ಥಿನಿಯರ ದೂರಿನ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹಾಗೂ ಎಲ್ಲಾ ಮಹಿಳಾ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ತನಿಖೆ ನಡೆಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.