ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ರಾಂಬನ್‌ನ ಬಟೋಟೆ ಪ್ರದೇಶದಲ್ಲಿ ಭಾರತೀಯ ಸೇನಾ ಬೆಂಗಾವಲಿನ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ.
ತಕ್ಷಣ ಸ್ಥಳಕ್ಕೆ ತಲುಪಿದ ರಂಬನ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಶರ್ಮಾ, ಚಕ್ವಾ ಕ್ಯಾಂಪ್‌ನಲ್ಲಿ ಭಯೋತ್ಪಾದಕರು ಸೇನೆಯ ಆರ್‌ಒಪಿ ಮೇಲೆ ದಾಳಿ ಮಾಡಿದ್ದಾರೆ ಎಂದು ಹೇಳಿದರು.
ದಾಳಿಯಲ್ಲಿ ಯಾವುದೇ ಸಾವು-ನೋವಿನ ಬಗ್ಗೆ ವರದಿ ಆಗಿಲ್ಲ. ಆದರೆ, ಸೇನೆ, ಪೊಲೀಸ್ ಮತ್ತು ಇತರ ಭದ್ರತಾ ಸಂಸ್ಥೆಗಳು ಈ ಪ್ರದೇಶವನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು.
ವರದಿಗಳ ಪ್ರಕಾರ, ಬೆಳಿಗ್ಗೆ 7: 30 ರ ಸುಮಾರಿಗೆ ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್) 244 ರಲ್ಲಿ ಬಟೋಟೆ ಎಂಬಲ್ಲಿ ಸಿವಿಲ್ ವಾಹನವನ್ನು ನಿಲ್ಲಿಸಲು ಪ್ರಯತ್ನಿಸಿದರು. ನಂತರ, ಸೈನ್ಯ ಮತ್ತು ಇಬ್ಬರು ಅನುಮಾನಾಸ್ಪದ ವ್ಯಕ್ತಿಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎನ್ನಲಾಗಿದೆ.
ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸುತ್ತಿರುವ ವೇಳೆ ಭಾರತೀಯ ಸೇನೆಯು ಶುಕ್ರವಾರ ವಿಡಿಯೋ ಬಿಡುಗಡೆ ಮಾಡಿದ ಬಳಿಕ ಈ ಘಟನೆ ನಡೆದಿದೆ.
Must Watch: ಕುಪ್ವಾರ ಬಳಿಯ ಗಡಿಗೆ ಪಾಕ್ ಉಗ್ರರು ಬರೋದ್ ಹೇಗ್ ಗೊತ್ತಾ?