Gujarat Assembly Election 2022: ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು (ಗುರುವಾರ) ಗುಜರಾತ್ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನೂಪ್ ಚಂದ್ರ ಪಾಂಡೆ ಅವರು ಸುದ್ದಿಗೋಷ್ಠಿಯಲ್ಲಿ ಗುಜರಾತ್‌ನ ಸಂಪೂರ್ಣ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಚುನಾವಣಾ ಆಯೋಗವು ಕಳೆದ ತಿಂಗಳು ಹಿಮಾಚಲ ಪ್ರದೇಶದ ಚುನಾವಣಾ ದಿನಾಂಕಗಳನ್ನು ಘೋಷಿಸಿತ್ತು.


COMMERCIAL BREAK
SCROLL TO CONTINUE READING

ಗುಜರಾತ್‌ನಲ್ಲಿ ಮೊದಲ ಹಂತದ ಅಸೆಂಬ್ಲಿ ಚುನಾವಣೆ ಡಿಸೆಂಬರ್ 1 ರಂದು ಮತ್ತು ಎರಡನೇ ಹಂತ ಡಿಸೆಂಬರ್ 5 ರಂದು ನಡೆಯಲಿದೆ. ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿ : Funny Video : ಮಾವುತನ ಪಕ್ಕ ಕುಳಿತು ಮೊಬೈಲ್ ನೋಡುವ ಆನೆ! ವಿಡಿಯೋ ಸಿಕ್ಕಾಪಟ್ಟೆ ವೈರಲ್‌


ಕಳೆದ ಬಾರಿ 2017 ರಲ್ಲಿ ಗುಜರಾತ್‌ನಲ್ಲಿ ಅಸೆಂಬ್ಲಿ ಚುನಾವಣೆಗಳು ನಡೆದಿದ್ದು, ಬಿಜೆಪಿ ಸತತ ಐದನೇ ಅವಧಿಯ ಅಧಿಕಾರವನ್ನು ಪಡೆಯಲು ಯಶಸ್ವಿಯಾಯಿತು. ಕಳೆದ ಬಾರಿ ರಾಜ್ಯ ವಿಧಾನಸಭೆಯ 182 ಸ್ಥಾನಗಳಲ್ಲಿ ಬಿಜೆಪಿ ಪಕ್ಷ 99 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 77 ಸ್ಥಾನಗಳನ್ನು ಪಡೆದುಕೊಂಡಿತ್ತು.


ಈ ಬಾರಿಯ ಚುನಾವಣೆಯು ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವೆ ತ್ರಿಕೋನ ಸ್ಪರ್ಧೆ ಏರ್ಪಡಲಿದೆ. ಬಿಜೆಪಿ ಪಕ್ಷದ ನಾಯಕರು ಗುಜರಾತ್‌ನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ, ಆದರೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಎಎಪಿ ರಾಜ್ಯದಲ್ಲಿ ಮತದಾರರನ್ನು ಸೆಳೆಯಲು ಸಂಪೂರ್ಣ ಪ್ರಚಾರವನ್ನು ಪ್ರಾರಂಭಿಸಿದೆ.


ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ 3,24,422 ಹೊಸ ಮತದಾರರು ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ. ಒಟ್ಟು ಮತಗಟ್ಟೆಗಳ ಸಂಖ್ಯೆ 51,782. ರಾಜ್ಯದಲ್ಲಿ ಸ್ಥಾಪಿಸಲಾಗಿರುವ ಶೇ.50ರಷ್ಟು ಮತದಾನ ಕೇಂದ್ರಗಳಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಇರುತ್ತದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.


ಇದನ್ನೂ ಓದಿ : ಕಾರ್ಮಿಕ ಸೋಗಿನಲ್ಲಿ ಲಕ್ಷಾಂತರ ರೂ. ಎಗರಿಸಿದ್ದ ಕಿರಾತಕ ಅರೆಸ್ಟ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.