ಗುಜರಾತ್‌ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 60 ಜನರು ಸಾವು

ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Written by - Zee Kannada News Desk | Last Updated : Oct 31, 2022, 12:14 AM IST
  • ಇನ್ನೂ ಹಲವರು ಸಿಕ್ಕಿಬಿದ್ದಿರುವ ಶಂಕೆ ಇರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
  • ರಾಜ್ಯದ ರಾಜಧಾನಿ ಅಹಮದಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಮೊರ್ಬಿಯಲ್ಲಿ ಮಚ್ಚು ನದಿಯಲ್ಲಿ ಈ ಘಟನೆ ನಡೆದಿದೆ.
ಗುಜರಾತ್‌ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು 60 ಜನರು ಸಾವು title=
Photo Courtsey: Twitter

ಅಹಮದಾಬಾದ್‌: ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿಯಲ್ಲಿ ಕೇಬಲ್ ಸೇತುವೆ ಕುಸಿದು ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇನ್ನೂ ಹಲವರು ಸಿಕ್ಕಿಬಿದ್ದಿರುವ ಶಂಕೆ ಇರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

ರಾಜ್ಯದ ರಾಜಧಾನಿ ಅಹಮದಾಬಾದ್‌ನಿಂದ ಸುಮಾರು 200 ಕಿಮೀ ದೂರದಲ್ಲಿರುವ ಮೊರ್ಬಿಯಲ್ಲಿ ಮಚ್ಚು ನದಿಯಲ್ಲಿ ಈ ಘಟನೆ ನಡೆದಿದೆ.ಪರಿಹಾರ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತಕ್ಕೆ ಸಂಬಂಧಿಸಿದಂತೆ ಗುಜರಾತ್ ಮುಖ್ಯಮಂತ್ರಿ ಮತ್ತು ಇತರ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ.

ಈ ಪ್ರದೇಶವು ಯಾವುದೇ ವಿದ್ಯುತ್ ಸಂಪರ್ಕವನ್ನು ಹೊಂದಿಲ್ಲದಿರುವುದು ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಕಷ್ಟಕರವಾಗಿಸಿದೆ. ಸ್ಥಳೀಯ ಶಾಸಕ ಲಲಿತ್ ಮಾತನಾಡಿ, ಚುನಾವಣೆ ಹಿನ್ನೆಲೆಯಲ್ಲಿ 6 ತಿಂಗಳ ಹಿಂದೆಯಷ್ಟೇ ಮೇಲ್ಸೇತುವೆ ಉದ್ಘಾಟನೆಯಾಗಿದೆ. ತರಾತುರಿಯಲ್ಲಿ ಕಾಮಗಾರಿ ನಡೆದಿದ್ದು, ಸೂಕ್ತ ಪರಿಶೀಲನೆ ನಡೆಸಿಲ್ಲ ಎಂದು ಆರೋಪಿಸಿದರು. ಆದರೆ, ನೀರಿನ ಮಟ್ಟ ಹೆಚ್ಚಿಲ್ಲ ಎಂದು ಅವರು ಹೇಳಿದರು, ಮತ್ತು ನೀರಿನಲ್ಲಿ ಮುಳುಗಿ ಸಾವು ಸಂಭವಿಸುವ ಸಾಧ್ಯತೆಗಳು ತೀರಾ ವಿರಳ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News