ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಪತನ: ರಾಜೀನಾಮೆ ಘೋಷಿಸಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ!

"ಇಂದು ನಾನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಧೈರ್ಯವನ್ನು ತೆಗೆದುಕೊಂಡಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಭಾವಿಸುತ್ತೇನೆ. ಮುಂದಿನ ದಿನಗಳಲ್ಲಿ ಗುಜರಾತ್‌ಗಾಗಿ ನಾನು ನಿಜವಾಗಿಯೂ ಕೆಲಸ ಮಾಡಲು ಸಾಧ್ಯವಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

Written by - Bhavishya Shetty | Last Updated : May 18, 2022, 04:19 PM IST
  • ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ರಾಜೀನಾಮೆ
  • ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ
  • ಟ್ವೀಟ್‌ ಮೂಲಕ ಮಾಹಿತಿ ನೀಡಿದ ಪಟೇಲ್‌
ಕಾಂಗ್ರೆಸ್‌ನ ಮತ್ತೊಂದು ವಿಕೆಟ್‌ ಪತನ: ರಾಜೀನಾಮೆ ಘೋಷಿಸಿದ ಕಾಂಗ್ರೆಸ್ ಕಾರ್ಯಾಧ್ಯಕ್ಷ!  title=
Gujarat Congress

ನವದೆಹಲಿ: ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರು ಪಕ್ಷದ ಎಲ್ಲಾ ಹುದ್ದೆಗಳಿಗೆ ಇಂದು ರಾಜೀನಾಮೆ ನೀಡಿದ್ದಾರೆ. ಪಟೇಲ್ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿ: ಮೇ 20ರಿಂದ ಕ್ರೇಜಿಸ್ಟಾರ್‌ ಪುತ್ರನ ಸಿನಿಮಾ "ಪ್ರಾರಂಭ"..!

"ಇಂದು ನಾನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಧೈರ್ಯವನ್ನು ತೆಗೆದುಕೊಂಡಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಭಾವಿಸುತ್ತೇನೆ. ಮುಂದಿನ ದಿನಗಳಲ್ಲಿ ಗುಜರಾತ್‌ಗಾಗಿ ನಾನು ನಿಜವಾಗಿಯೂ ಕೆಲಸ ಮಾಡಲು ಸಾಧ್ಯವಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಹಾರ್ದಿಕ್ ಪಟೇಲ್ ಅವರ ರಾಜೀನಾಮೆ ಖಂಡಿತವಾಗಿಯೂ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದಂತಾಗಿದೆ. ಅವರನ್ನು ಗುಜರಾತ್ ಪಕ್ಷದ ಹಿರಿಯ ನಾಯಕರು ಕಡೆಗಣಿಸಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದವು. 

ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಪಕ್ಷದ ಘಟಕದಲ್ಲಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಹಾರ್ದಿಕ್‌ರನ್ನು ಈಗಾಗಲೇ ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ. ರಾಹುಲ್ ಗಾಂಧಿ ಅವರೇ ಹಾರ್ದಿಕ್ ಪಟೇಲ್ ಅವರಿಗೆ ಪಕ್ಷದಲ್ಲಿ ಮುಂದುವರಿಯುವಂತೆ ಸಂದೇಶ ಕಳುಹಿಸಿದ್ದಾರೆ. ಆದರೆ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇದನ್ನು ಓದಿ: ಏರಿಳಿತವಾಗುವ ಬ್ಲಡ್ ಶುಗರ್ ಜೊತೆಗೆ ಈ ಕಾಯಿಲೆಗಳನ್ನು ನಿಯಂತ್ರಿಸುವ ಶಕ್ತಿಯಿರುವ ಎಲೆಯಿದು

ಇನ್ನೊಂದು ಮೂಲಗಳ ಪ್ರಕಾರ, ಏಪ್ರಿಲ್‌ನಲ್ಲಿ ಅಹಮದಾಬಾದ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪಟೇಲ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬಂದಿದೆ. 

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News