Gujarat Election Results 2022 live update: ಇಂದು (ಡಿಸೆಂಬರ್ 08) ಗುರುವಾರದಂದು ಗುಜರಾತ್ ವಿಧಾನಸಭಾ ಚುನಾವಣೆ 2022ರ ಫಲಿತಾಂಶ ಹೊರಬೀಳಲಿದೆ. ಬಹುತೇಕ ಎಕ್ಸಿಟ್ ಪೋಲ್ ಫಲಿತಾಂಶಗಳು ಗುಜರಾತ್ನಲ್ಲಿ ಮತ್ತೆ ಭಾರತೀಯ ಜನತಾ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಆದಾಗ್ಯೂ, ಗುಜರಾತ್ ಅಸೆಂಬ್ಲಿ ಚುನಾವಣೆಯ ಫಲಿತಾಂಶಗಳು ನಿರ್ಗಮನ ಸಮೀಕ್ಷೆಗಳನ್ನು ಹುಸಿಗೊಳಿಸಲಿವೆ ಎಂದು ಪ್ರತಿಪಕ್ಷಗಳು ವಿಶ್ವಾಸ ವ್ಯಕ್ತಪಡಿಸಿವೆ. ಇನ್ನು ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನುಡಿ ಎಂದೇ ಬಿಂಬಿಸಲಾಗುತ್ತಿದ್ದು ಇದೀಗ ಎಲ್ಲರ ಚಿತ್ತ ಗುಜರಾತ್ನತ್ತ ನೆಟ್ಟಿದೆ.
ಗುಜರಾತ್ ಚುನಾವಣಾ ಫಲಿತಾಂಶ 2022ರ ಮತ ಎಣಿಕೆ:
ಗುಜರಾತ್ನ 182 ವಿಧಾನಸಭಾ ಕ್ಷೇತ್ರಗಳಿಗೆ ನಡೆದಿರುವ ಚುನಾವಣೆಗಾಗಿ 37 ಮತ ಎಣಿಕೆ ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು ಇದಕ್ಕಾಗಿ ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲೂ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ನೀವು ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶದ ಲೈವ್ ಅಪ್ಡೇಟ್ಗಳು ಮತ್ತು ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶಗಳ ಎಲ್ಲಾ ಪ್ರಮುಖ ವಿವರಗಳನ್ನು ಎಲ್ಲಿ ಪಡೆಯುವುದು? ಎಂದು ಯೋಚಿಸುತ್ತಿದ್ದರೆ ನಿಮ್ಮ ಈ ಪ್ರಶ್ನೆಗೆ ಉತ್ತರ ಇಲ್ಲಿದೆ.
ಈ ಕೆಳಗಿನ ಲಿಂಕ್ಗಳಿಂದ ನೀವು ಗುಜರಾತ್ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿವರಗಳನ್ನು ಪಡೆಯಬಹುದು:
ಗುಜರಾತ್ ಚುನಾವಣಾ ಫಲಿತಾಂಶಗಳನ್ನು ಚುನಾವಣಾ ಆಯೋಗದ ವೆಬ್ಸೈಟ್ https://results.eci.gov.in/ ನಲ್ಲಿ ನೋಡಬಹುದು. ಇದಲ್ಲದೇ, ವೋಟರ್ ಟರ್ನ್ಔಟ್ ನಲ್ಲಿಯೂ ಚುನಾವಣಾ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಇದನ್ನೂ ಓದಿ- "ದೆಹಲಿಯನ್ನು ಉತ್ತಮಗೊಳಿಸಲು ಪ್ರಧಾನಿಯವರ ಆಶೀರ್ವಾದ ಬೇಕು"
ಎರಡು ಹಂತಗಳಲ್ಲಿ ನಡೆದಿದ್ದ ಗುಜರಾತ್ ಅಸೆಂಬ್ಲಿ ಚುನಾವಣೆ:
2022ರ ಗುಜರಾತ್ ವಿಧಾನಸಭಾ ಚುನಾವಣೆಯನ್ನು ಡಿಸೆಂಬರ್ 1 ಮತ್ತು 5 ರಂದು 33 ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ನಡೆಸಲಾಗಿದೆ. ಸಾಮಾನ್ಯವಾಗಿ ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇರುತ್ತದೆ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ ಚುನಾವಣಾ ಅಖಾಡದಲ್ಲಿ ತೀವ್ರ ಸ್ಪರ್ಧೆಯನ್ನೊಡ್ಡಿದ್ದು ಗುಜರಾತ್ ಚುನಾವಣೆಯಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಟ್ಟಿತ್ತು.
ಈ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಮಂತ್ರಿ ಅಭ್ಯರ್ಥಿ ಇಸುದನ್ ಗಧ್ವಿ, ಯುವ ಮುಖಂಡರಾದ ಹಾರ್ದಿಕ್ ಪಟೇಲ್, ಜಿಗ್ನೇಶ್ ಮೇವಾನಿ ಮತ್ತು ಅಲ್ಪೇಶ್ ಠಾಕೂರ್ ಸೇರಿದಂತೆ ಒಟ್ಟು 1,621 ಅಭ್ಯರ್ಥಿಗಳು ತಮ್ಮ ಅದೃಷ್ಟವನ್ನು ಪರೀಕ್ಷಿಸಿದ್ದರು.
ಈ ಬಾರಿಯ ಗುಜರಾತ್ ಚುನಾವಣೆಯಲ್ಲಿ ಮತದಾನದ ಅಂಕಿಅಂಶಗಳನ್ನು ಪರಿಶೀಲಿಸಿದರೆ, ಕೇವಲ ಐದು ಜಿಲ್ಲೆಗಳಲ್ಲಿ ಮಾತ್ರ ಶೇ. 70ಕ್ಕಿಂತ ಹೆಚ್ಚು ಮತದಾನವಾಗಿದೆ. 22 ಜಿಲ್ಲೆಗಳಲ್ಲಿ ಶೇ.60ರಿಂದ 69ರಷ್ಟು ಮತದಾನವಾಗಿದೆ. ಇದಲ್ಲದೇ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಅಹಮದಾಬಾದ್ ಜಿಲ್ಲೆಯಲ್ಲಿ ಕೇವಲ ಶೇ.59.05ರಷ್ಟು ಮತದಾನವಾಗಿದೆ.
ಇದನ್ನೂ ಓದಿ- MCD Election Results: ಆಮ್ ಆದ್ಮಿ ಪಕ್ಷಕ್ಕೆ ಬಹುಮತ, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯ!
ಗುಜರಾತ್ನಲ್ಲಿ ಈ ಬಾರಿಯ ಚುನಾವಣೆಯಲ್ಲಿ 66.31 ರಷ್ಟು ಮತದಾನವಾಗಿದ್ದು, ಇದು ಅತ್ಯಂತ ಕಡಿಮೆ ಮತದಾನವಾಗಿದೆ. ಹಿಂದಿನ ವರ್ಷಗಳ ಶೇಕಡಾವಾರು ಪ್ರಮಾಣವನ್ನು ಗಮನಿಸಿದರೆ, 2012 ರಲ್ಲಿ 72.02% ಮತ್ತು 2017 ರಲ್ಲಿ 69.01% ಮತದಾನವಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.