ಅಹಮದಾಬಾದ್: ಗುಜರಾತ್‌ನ ವಲ್ಸಾದ್‌ನ ಪ್ಲಾಸ್ಟಿಕ್ ಉತ್ಪಾದನಾ ಘಟಕದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ವರದಿಯಾದ ಕೂಡಲೇ ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದಾರೆ.  ಘಟನೆಯಲ್ಲಿ ಸಾವುನೋವುಗಳ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.


COMMERCIAL BREAK
SCROLL TO CONTINUE READING

ವರದಿಗಳ ಪ್ರಕಾರ ಮಧ್ಯಾಹ್ನ ಪ್ಲಾಸ್ಟಿಕ್ ಕಾರ್ಖಾನೆ  (Plastic Factory) ಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ವರದಿಯಾದ ಕೂಡಲೇ ಅಗ್ನಿಶಾಮಕ ದಳ ಮತ್ತು ಆಂಬುಲೆನ್ಸ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅಗ್ನಿಶಾಮಕ ಟೆಂಡರ್‌ಗಳು ಬೆಂಕಿ (Fire)ಯನ್ನು ನಂದಿಸಲು ಪ್ರಯತ್ನಿಸುತ್ತಿವೆ ಮತ್ತು ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಾಗ ಜನರು ಇದ್ದಾರೆಯೇ ಎಂದು ಖಚಿತಪಡಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಈ ಅಗ್ನಿ ಅನಾಹುತಕ್ಕೆ ಕಾರಣ ಏನೆಂದು ತಿಳಿದುಬಂದಿಲ್ಲ ಅಪಘಾತದ ವಿಡಿಯೋ ಹೊರಬಂದಿದ್ದು, ಇದರಲ್ಲಿ ಇಡೀ ಕಾರ್ಖಾನೆ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡುಬಂದಿದೆ. ಈ ಅನಾಹುತ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ಕೆಲಸ ನಡೆಯುತ್ತಿತ್ತೇ ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.