)
Ahmedabad Plane Crash Update: ಗುಜರಾತ್ನ ಅಹಮದಾಬಾದ್ನಲ್ಲಿ ಸರ್ದಾರ್ ವಲ್ಲಭಭಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲೇ ಮೇಘಾನಿ ಎಂಬ ವಸತಿ ಪ್ರದೇಶದಲ್ಲಿ ಅಪಘಾತಕ್ಕಿಡಾಗಿದೆ ಎಂದು ವರದಿಯಾಗಿದೆ.
ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದ್ದು ವಿಮಾನದಲ್ಲಿ ಒಟ್ಟು 242 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
An Air India plane with 242 passengers onboard has crashed in Gujarat's Ahmedabad, confirms the State Police Control Room
More details awaited pic.twitter.com/RPAYU8KfUM
— ANI (@ANI) June 12, 2025
ಅಹಮದಾಬಾದ್ನಿಂದ ಗ್ಯಾಟ್ವಿಕ್ಗೆ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ಬಿ787 ವಿಮಾನ VT-ANB, ಅಹಮದಾಬಾದ್ನಿಂದ ಟೇಕ್ ಆಫ್ ಆದ ತಕ್ಷಣ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ 2 ಪೈಲಟ್ಗಳು ಮತ್ತು 10 ಕ್ಯಾಬಿನ್ ಸಿಬ್ಬಂದಿ ಸೇರಿದಂತೆ 242 ಜನರಿದ್ದರು. ವಿಮಾನವು ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ನೇತೃತ್ವದಲ್ಲಿ ಮೊದಲ ಅಧಿಕಾರಿ ಕ್ಲೈವ್ ಕುಂದರ್ ವಿಮಾನ ಹಾರಾಟ ನಡೆಸುತ್ತಿದ್ದರು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಮಾಹಿತಿ ನೀಡಿದೆ.
ಕ್ಯಾಪ್ಟನ್ ಸುಮೀತ್ ಸಭರ್ವಾಲ್ 8200 ಗಂಟೆಗಳ ಅನುಭವ ಹೊಂದಿರುವ LTC ಆಗಿದ್ದಾರೆ. ಸಹ-ಪೈಲಟ್ 1100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಏರ್ ಇಂಡಿಯಾ ವಿಮಾನ ಅಪಘಾತಕ್ಕಿಡಾಗುತಿದ್ದಂತೆ ಆಗಸದೆತ್ತರಕ್ಕೆ ಗಾಢ ಕಪ್ಪು ಹೊಗೆ ಆವರಿಸಿದ್ದು ಅಗ್ನಿಶಾಮಕ ದಳ ತಂಡಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಲಭ್ಯವಿರುವ ಮಾಹಿತಿಗಳ ಪ್ರಕಾರ, ಮೇಘಾನಿ ನಗರದ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತದ ನಂತರ, ಹಲವಾರು ಕಿಲೋಮೀಟರ್ಗಳವರೆಗೆ ಹೊಗೆಯ ಮೋಡಗಳು ಗೋಚರಿಸುತ್ತಿವೆ ಎಂದು ವರದಿಯಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣಗಳು ಇನ್ನೂ ತಿಳಿದುಬಂದಿಲ್ಲ. ಸ್ಥಳೀಯ ಆಡಳಿತ ಮತ್ತು ವಾಯುಯಾನ ಪ್ರಾಧಿಕಾರವು ತನಿಖೆ ಆರಂಭಿಸಿವೆ ಎನ್ನಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.