ಗುಜರಾತ್ ಚುನಾವಣೆ : ಮೊದಲ ಹಂತದಲ್ಲಿ ಶೇ.60 ಮತದಾನ

ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಪೂರ್ಣಗೊಂಡಿದ್ದು ಸಂಜೆ 4 ಗಂಟೆವರೆಗೆ ಶೇ.60 ಮತದಾನ ನಡೆದಿದೆ. 

Last Updated : Dec 9, 2017, 06:52 PM IST
ಗುಜರಾತ್ ಚುನಾವಣೆ : ಮೊದಲ ಹಂತದಲ್ಲಿ ಶೇ.60 ಮತದಾನ title=

ಅಹ್ಮದಾಬಾದ್ : ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಪೂರ್ಣಗೊಂಡಿದ್ದು ಸಂಜೆ 4 ಗಂಟೆವರೆಗೆ ಶೇ.60 ಮತದಾನ ನಡೆದಿದೆ. 

ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್ ಪ್ರದೇಶಗಳ 89 ಕ್ಷೇತ್ರಗಳನ್ನು ಒಳಗೊಂಡ ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತದ ಶನಿವಾರ 8 ಗಂಟೆಗೆ ಮತದಾನ ಆರಂಭವಾಯಿತು.

ರಾಜ್ಯದ 182 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 89 ಕ್ಷೇತ್ರಗಳ 24,689 ಮತಗಟ್ಟೆಗಳಲ್ಲಿ ಇಂದು ಮತದಾನ ನಡೆಯಿತು. ಈ ಚುನಾವಣೆಯು ಪ್ರಮುಖವಾಗಿ ಎರಡು ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. 

ಉಳಿದ 93 ಸ್ಥಾನಗಳಿಗೆ ಎರಡನೇ ಹಂತದ ಚುನಾವಣೆ ಡಿಸೆಂಬರ್ 14 ರಂದು ನಡೆಯಲಿದೆ. ಡಿಸೆಂಬರ್ 18 ರಂದು ಮತಗಳ ಎಣಿಕೆಯು ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. 

Trending News