ನವದೆಹಲಿ: ಗುರಗ್ರಾಮ್ನ ಉಲವಸ್ತ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವನ್ನು ಕುಸಿದಿದೆ. ಕಟ್ಟಡದ ಅವಶೇಷಗಳಲ್ಲಿ ಐದು ಕ್ಕೂ ಹೆಚ್ಚಿನ ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡ ಕುಸಿತದ ಬಗ್ಗೆ ಮಾಹಿತಿ ಲಭಿಸಿದೊಡನೆ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದಾರೆ.


COMMERCIAL BREAK
SCROLL TO CONTINUE READING

ಮಾಹಿತಿಯ ಪ್ರಕಾರ, ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದ ವೇಳೆ ಇದ್ದಕ್ಕಿದ್ದಂತೆ ಕಟ್ಟಡ ಕುಸಿದಿದೆ. ಕಟ್ಟಡ ಕುಸಿತದ ಬಳಿಕ ಕಟ್ಟಡದ ಅವಶೇಷಗಳಡಿ ಕಾರ್ಮಿಕರು ಸಿಲುಕಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯ ಭರದಿಂದ ಸಾಗಿದೆ.

ಸೈಬರ್ ಹಬ್ನಿಂದ ಕೇವಲ 12 ಕಿಲೋಮೀಟರ್ ದೂರದಲ್ಲಿರುವ ಈ ಅಪಘಾತ ಸಂಭವಿಸಿದೆ ಎಂದು ಮಾಹಿತಿ ಲಭಿಸಿದೆ. ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆ (ಎನ್ಡಿಆರ್ಎಫ್) ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿವೆ ಎಂದು ಅವರು ಹೇಳಿದರು.