Gyanvapi Case: ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಪ್ರಕರಣ, ಇಂದು ಹೈಕೋರ್ಟ್‌ನಲ್ಲಿ ಮುಸ್ಲಿಂ ಪರ ಅರ್ಜಿ ವಿಚಾರಣೆ

Gyanvapi Case: ಜನವರಿ 31 ರಂದು ನೀಡಿದ ತನ್ನ ಆದೇಶದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು.  

Written by - Chetana Devarmani | Last Updated : Feb 6, 2024, 10:43 AM IST
  • ಜ್ಞಾನವಾಪಿ ಪ್ರಕರಣದ ವಿಚಾರಣೆ
  • ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಪ್ರಕರಣ
  • ಹೈಕೋರ್ಟ್‌ನಲ್ಲಿ ಮೇಲ್ಮನವಿ ವಿಚಾರಣೆ
Gyanvapi Case: ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಿದ ಪ್ರಕರಣ, ಇಂದು ಹೈಕೋರ್ಟ್‌ನಲ್ಲಿ ಮುಸ್ಲಿಂ ಪರ ಅರ್ಜಿ ವಿಚಾರಣೆ  title=
Gyanvapi

Gyanvapi Case Hearing: ಜ್ಞಾನವಾಪಿ ಪ್ರಕರಣದ ವಿಚಾರಣೆ ಇಂದು (ಫೆಬ್ರವರಿ 6) ಅಲಹಾಬಾದ್ ಹೈಕೋರ್ಟ್‌ನಲ್ಲಿ ನಡೆಯಲಿದೆ. ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಾರಣಾಸಿ ನ್ಯಾಯಾಲಯದ ಆದೇಶದ ಬಳಿಕ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದು, ವಿಚಾರಣೆ ನಡೆಯಲಿದೆ.

ಇದನ್ನೂ ಓದಿ: Railway Recruitment 2024: 6,000 ಖಾಲಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ, ಸಂಪೂರ್ಣ ಮಾಹಿತಿ ಇಲ್ಲಿದೆ 

ಜನವರಿ 31 ರಂದು ನೀಡಿದ ತನ್ನ ಆದೇಶದಲ್ಲಿ ವಾರಣಾಸಿ ನ್ಯಾಯಾಲಯವು ಹಿಂದೂ ಭಕ್ತರಿಗೆ ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿತ್ತು. ಮುಂದಿನ ಏಳು ದಿನಗಳಲ್ಲಿ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ನ್ಯಾಯಾಲಯ ಹೇಳಿತ್ತು.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ವಾರಣಾಸಿ ನ್ಯಾಯಾಲಯದ ಆದೇಶದ ಬಳಿಕ ಮೇಲ್ಮನವಿಯನ್ನು ಸಲ್ಲಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಿರುವ ಮೇಲ್ಮನವಿಯಲ್ಲಿ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಆಚಾರ್ಯ ವೇದವ್ಯಾಸ ಪೀಠದ ಪ್ರಧಾನ ಅರ್ಚಕ ಶೈಲೇಂದ್ರ ಕುಮಾರ್ ಪಾಠಕ್ ಅವರನ್ನು ಕಕ್ಷಿದಾರರನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ BJP 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಪ್ರಧಾನಿ ಮೋದಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News