ಪ್ರಯಾಗ್‌ರಾಜ್: ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಯನ್ನು ವಿರೋಧಿಸಿ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ಗುರುವಾರ ಆಗಸ್ಟ್ 3ಕ್ಕೆ ಕಾಯ್ದಿರಿಸಿದೆ. ಅಲ್ಲಿಯವರೆಗೆ ಸರ್ವೆ ಕಾರ್ಯಕ್ಕೆ ತಡೆ ನೀಡುವಂತೆಯೂ ಎಎಸ್‌ಐಗೆ ನ್ಯಾಯಾಲಯ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ಅವರು ಮಧ್ಯಾಹ್ನದ ವೇಳೆ ಪ್ರಕರಣವನ್ನು ಆಲಿಸಿ ಮತ್ತು ಆಗಸ್ಟ್ 3 ಕ್ಕೆ ತಮ್ಮ ತೀರ್ಪನ್ನು ಕಾಯ್ದಿರಿಸಿದರು.


COMMERCIAL BREAK
SCROLL TO CONTINUE READING

ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಎಎಸ್‌ಐಗೆ ನಿರ್ದೇಶನ ನೀಡಿದ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.ನ್ಯಾಯಾಲಯವು ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿ ಮತ್ತು ಹಿಂದೂ ಪರ ವಾದವನ್ನು ಆಲಿಸಿತು.ಹಿರಿಯ ಎಎಸ್‌ಐ ಅಧಿಕಾರಿಗಳು ಕೂಡ ನ್ಯಾಯಾಲಯದಲ್ಲಿ ಹಾಜರಿದ್ದರು.


ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಅಸ್ತ್ರವಾಯ್ತಾ ತನ್ವೀರ್ ಸೇಠ್ ಪತ್ರ?


ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ತಡೆಯಾಜ್ಞೆ ನೀಡಿದೆ. ವಿಚಾರಣೆ ವೇಳೆ ಹಿರಿಯ ಎಎಸ್‌ಐ ಅಧಿಕಾರಿಯೊಬ್ಬರು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಎಎಸ್‌ಐ ತಂಡವು ಯಾವುದೇ ರೀತಿಯಲ್ಲಿ ರಚನೆಯನ್ನು (ಮಸೀದಿ) ನಾಶಮಾಡಲು ಹೋಗುವುದಿಲ್ಲ ಎಂದು ಅಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದರು.


ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂತೇಜಾಮಿಯಾ ಮಸೀದಿಯ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಪ್ರಿಟಿಂಕರ್ ದಿವಾಕರ್ ಅವರು ಗುರುವಾರ ಹೆಚ್ಚಿನ ವಿಚಾರಣೆಗೆ ವಿಷಯವನ್ನು ಮುಂದೂಡಿದರು. ಅಲ್ಲಿಯವರೆಗೂ ಎಎಸ್‌ಐ ಸಮೀಕ್ಷೆಗೆ ತಡೆಯಾಜ್ಞೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಆದೇಶಿಸಿದೆ.


ಇದನ್ನೂ ಓದಿ: ಕೃಷ್ಣಾ ನದಿ ಪಾತ್ರದಲ್ಲಿರೋ ಗ್ರಾಮಗಳಿಗೆ ಹೈ ಅಲರ್ಟ್


ಬುಧವಾರ ಬೆಳಿಗ್ಗೆ ನಡೆದ ವಿಚಾರಣೆಯ ಸಂದರ್ಭದಲ್ಲಿ, ಮುಖ್ಯ ನ್ಯಾಯಮೂರ್ತಿ ದಿವಾಕರ್ ಅವರು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅವರನ್ನು ವಾರಣಾಸಿಯಿಂದ ಎಎಸ್‌ಐನ ಯಾವುದೇ ಪರಿಣಿತ ಸದಸ್ಯರನ್ನು ಕರೆದು ಸಮೀಕ್ಷೆಯನ್ನು ಹೇಗೆ ನಡೆಸಲಾಗುತ್ತದೆ ಎಂಬುದನ್ನು ನ್ಯಾಯಾಲಯಕ್ಕೆ ಪ್ರದರ್ಶಿಸಲು ಕೇಳಿದರು ಮತ್ತು ಹೆಚ್ಚಿನ ವಿಚಾರಣೆಗಾಗಿ ಸಂಜೆ 4:30 ಕ್ಕೆ ನಿಗದಿಪಡಿಸಿದರು.ನ್ಯಾಯಾಲಯದ ಆದೇಶದ ಅನ್ವಯ ಎಎಸ್‌ಐ ಹೆಚ್ಚುವರಿ ನಿರ್ದೇಶಕ ಅಲೋಕ್ ತ್ರಿಪಾಠಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸರ್ವೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.