ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ಸ್ವೀಕಾರ ಕಾರ್ಯಕ್ರಮದ ಹಿನ್ನಲೆಯಲ್ಲಿ ಗುರುವಾರದಂದು ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದರು.



COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟ ಕೇವಲ 2 ಸ್ಥಾನಗಳನ್ನು ಗೆಲ್ಲುವ ಮೂಲಕ ಕಳಪೆ ಪ್ರದರ್ಶನ ತೋರಿದೆ. ಈ ಹಿನ್ನಲೆಯಲ್ಲಿ ಈಗ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಭವಿಷ್ಯ ತೂಗೊಯ್ಯಾಲೆಯಲ್ಲಿದೆ.ಈ ಹಿನ್ನಲೆಯಲ್ಲಿ ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ತೀವ್ರ ಕುತೂಹಲ ಕೆರಳಿಸಿದೆ.



ಈಗ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ ನಂತರ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ " ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ರಾಜ್ಯದಲ್ಲಿ ರಾಜಕೀಯ ಚಿತ್ರಣ ಹಾಗೂ ಮೈತ್ರಿ ಸರ್ಕಾರ ಹೇಗೆ ಸಹಕಾರದಿಂದ  ನಡೆಯಬೇಕು ಎನ್ನುವ ವಿಚಾರವಾಗಿ ಚರ್ಚೆ ನಡೆಸಿದೆವು. ಇದೇ ವೇಳೆ ನಾನು ಅವರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಯನ್ನು ತೊರೆಯದಿರುವಂತೆ ಮನವಿ ಮಾಡಿಕೊಂಡಿದ್ದೇನೆ" ಎಂದು ವಿನಂತಿಸಿಕೊಂಡಿದ್ದಾರೆ. 


ರಾಹುಲ್ ಗಾಂಧಿಯವರೊಂದಿಗಿನ ಭೇಟಿ ವೇಳೆ ಕುಮಾರಸ್ವಾಮಿ ಜೊತೆ ಸಾ.ರಾ.ಮಹೇಶ್ ಹಾಗೂ ಬಂಡೆಪ್ಪ ಕಾಶಂಪುರ್ ಉಪಸ್ಥಿತರಿದ್ದರು.