Happy Independence Day 2022: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿ ಭಾರತ
75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಧಾನಿ ಮೋದಿ ಇಂದು ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನವದೆಹಲಿ: ಭಾರತ ದೇಶವು 75ನೇ ವರ್ಷದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಸಂಭ್ರಮದಲ್ಲಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ನೀಡಿದ ‘ಹರ್ ಘರ್ ತಿರಂಗಾ’ ಅಭಿಯಾನದ ಕರೆಯಿಂದಾಗಿ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ. ಹಳ್ಳಯಿಂದ ದಿಲ್ಲಿವರೆಗೂ ಮನೆಗಳ ಮೇಲೆ ನಮ್ಮ ಹೆಮ್ಮೆಯ ರಾಷ್ಟ್ರಧ್ವಜ ಹಾರಾಡುತ್ತಿದೆ.
75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಧಾನಿ ಮೋದಿ ಇಂದು ದೆಹಲಿಯ ಕೆಂಪು ಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಗಿಭದ್ರತೆ ಹಿನ್ನೆಲೆ ಸುಮಾರು 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಕೆಂಪುಕೋಟೆಯ ದ್ವಾರದಲ್ಲಿ ಎಫ್‌ಆರ್‌ಎಸ್ ಇರುವ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಹಲವು ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ. ಕೆಂಪುಕೋಟೆ ಸುತ್ತಲಿನ 5 ಕಿ.ಮೀ ಪ್ರದೇಶವನ್ನು ಗಾಳಿಪಟ ನಿಷೇಧಿತ ವಲಯವೆಂದು ಘೋಷಿಸಲಾಗಿದೆ.
ಇದನ್ನೂ ಓದಿ: Mohan Bhagwat: 'ಭಯಪಡುವುದನ್ನು ಬಿಟ್ಟರೆ ಭಾರತ ಅಖಂಡವಾಗಲಿದೆ'
ಸ್ವಾತಂತ್ರ್ಯೋತ್ಸವದ ಮುಖ್ಯ ಕಾರ್ಯಕ್ರಮ ನಡೆಯಲಿರುವ ದೆಹಲಿಯಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.
ಇದನ್ನೂ ಓದಿ: ರಾಜ್ಯದ 18 ಮಂದಿ ಪೊಲೀಸರಿಗೆ ರಾಷ್ಟ್ರಪತಿ ಪದಕ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.