ನವದೆಹಲಿ : ಪಂಜಾಬ್‌ನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ವಿದ್ಯಮಾನಗಳು ತೀವ್ರಗೊಳ್ಳುತ್ತಿವೆ. ಈ ನಡುವೆ ಕ್ರಿಕೆಟಿಗ ಹರ್ಭಜನ್ ಸಿಂಗ್ ಕಾಂಗ್ರೆಸ್ ಸೇರುವ ಚರ್ಚೆಯೂ ಶುರುವಾಗಿದೆ.


COMMERCIAL BREAK
SCROLL TO CONTINUE READING

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿದ್ದು(Navjot Singh Sidhu) ಅವರು ಟ್ವಿಟರ್‌ನಲ್ಲಿ ಹರ್ಭಜನ್ ಜೊತೆ ಇರುವ ಫೋಟೋವನ್ನು ಹಂಚಿಕೊಂಡಿದ್ದಾರೆ. "ಸಾಧ್ಯತೆಗಳಿಂದ ತುಂಬಿರುವ ಫೋಟೋ.... ಮಿನುಗುವ ತಾರೆ ಭಜ್ಜಿಯೊಂದಿಗೆ " ಎಂದು ಫೋಟೋ ಶೀರ್ಷಿಕೆಯಲ್ಲಿ ಬರೆದಿದ್ದಾರೆ. 


Harbhajan Singh) ಈ ಬಗ್ಗೆ ಘೋಷಣೆ ಮಾಡಬಹುದೆಂದು ಊಹಿಸಲಾಗಿದೆ. ಆದರೆ, ಸದ್ಯಕ್ಕೆ ಸಿದ್ದು ಟ್ವೀಟ್ ಬಗ್ಗೆ ಮೌನ ವಹಿಸಿದ್ದಾರೆ.


ಇದನ್ನೂ ಓದಿ : 


ಪಂಜಾಬ್ ವಿಧಾನಸಭೆ(Punjab Assembly Election 2021)ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್, ಶಿರೋಮಣಿ ಅಕಾಲಿ ದಳ (SAD), ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ರಾಜ್ಯದಲ್ಲಿ ಮತದಾರರನ್ನು ಸೆಳೆಯಲು ಪೂರ್ಣ ಪ್ರಮಾಣದಲ್ಲಿ ಶ್ರಮಿಸುತ್ತಿವೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನಂತರ, ಚರಂಜಿತ್ ಸಿಂಗ್ ಚನ್ನಿ() ಪ್ರಸ್ತುತ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ, ಕಳೆದ 5 ವರ್ಷಗಳಿಂದ ಅಧಿಕಾರದಿಂದ ಹೊರಗುಳಿದ ಎಸ್‌ಎಡಿ ಬಿಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ, ಆದರೆ ಬಿಜೆಪಿ ಮತ್ತು ಕ್ಯಾಪ್ಟನ್ ಅಮರಿಂದರ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವು ಮೈತ್ರಿಯ ಸಾಧ್ಯತೆಗಳನ್ನು ಅನ್ವೇಷಿಸುತ್ತಿದೆ. ಮತ್ತೊಂದೆಡೆ, ಆಮ್ ಆದ್ಮಿ ಪಕ್ಷವು ಪ್ರಸ್ತುತ ಚುನಾವಣಾ ಕಣದಲ್ಲಿ ತನ್ನದೇ ಆಧಾರದ ಮೇಲೆ ನಿಂತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.