ಬಿಜೆಪಿಗೆ ಸೇರಲಿರುವ ಹಾರ್ದಿಕ್ ಪಟೇಲ್
ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಗುಜರಾತ್ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂದು ಸುದ್ದಿ ವರದಿಗಳು ತಿಳಿಸಿವೆ.
ಗಾಂಧಿನಗರ (ಗುಜರಾತ್): ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದಿದ್ದ ಗುಜರಾತ್ ಪಾಟಿದಾರ್ ನಾಯಕ ಹಾರ್ದಿಕ್ ಪಟೇಲ್ ಅವರು ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂದು ಸುದ್ದಿ ವರದಿಗಳು ತಿಳಿಸಿವೆ.ಹಾರ್ದಿಕ್ ಅವರು ಜೂನ್ 2 ರಂದು ಬಿಜೆಪಿಗೆ ಸೇರುವುದಾಗಿ ದೃಢಪಡಿಸಿದ್ದಾರೆ.
ಅವರು ಕಾಂಗ್ರೆಸ್ ತೊರೆದ ನಂತರ, ಹಾರ್ದಿಕ್ ಕಾಂಗ್ರೆಸ್ ನಾಯಕತ್ವವನ್ನು ತರಾಟೆಗೆ ತೆಗೆದುಕೊಳ್ಳುತ್ತಾ ಕಾಂಗ್ರೆಸ್ ಪಕ್ಷವು ಮತ್ತು ಹಿಂದೂಗಳ ವಿರುದ್ಧ ಹಾಗೂ ಶ್ರೀರಾಮನ ವಿರುದ್ಧ ಕೆಂಡ ಕಾರುತ್ತಿರುವುದೇಕೆ? ಎಂದು ಪ್ರಶ್ನಿಸಿದ್ದರು.
ಇದನ್ನೂ ಓದಿ : ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ'
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಬಳಸಲಾಗುತ್ತಿರುವ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜನೆ ಮಾಡಿದ್ದವು ಎಂದು ಆರೋಪಿಸಿರುವ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಾ "ಕಾಂಗ್ರೆಸ್ ಪಕ್ಷವು ಜನರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡುತ್ತದೆ ಮತ್ತು ಯಾವಾಗಲೂ ನಂಬಿಕೆಗೆ ಧಕ್ಕೆ ತರಲು ಪ್ರಯತ್ನಿಸುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಇಂದು ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕರೊಬ್ಬರು ರಾಮ ಮಂದಿರದ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಪಟೇಲ್ ಟ್ವೀಟ್ ಮಾಡಿದ್ದಾರೆ.ನಂತರ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ ಅವರು, "ಭಗವಾನ್ ಶ್ರೀರಾಮನ ವಿರುದ್ಧ ನಿಮಗೆ ದ್ವೇಷವಿರುವುದೇಕೆ? ಹಿಂದೂಗಳನ್ನು ಏಕೆ ದ್ವೇಷಿಸುತ್ತೀರಿ? ಶತಮಾನಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ಸಹ ನಿರ್ಮಿಸಲಾಗುತ್ತಿದೆ, ಆದರೆ ಕಾಂಗ್ರೆಸ್ ನಾಯಕರು ಮಾತ್ರ ಶ್ರೀರಾಮನ ವಿರುದ್ಧ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ ಎಂದು ಟೀಕಿಸಿದ್ದರು.ಅಯೋಧ್ಯೆ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸಿಎಂ ಬೊಮ್ಮಾಯಿ ಸಾಂತ್ವನ
ಗುಜರಾತ್ ಕಾಂಗ್ರೆಸ್ ನಾಯಕರು ರಾಜ್ಯದ ನೈಜ ಸಮಸ್ಯೆಗಳನ್ನು ಪರಿಹರಿಸುವ ಬದಲು ಚಿಕನ್ ಸ್ಯಾಂಡ್‌ವಿಚ್ ಬಗ್ಗೆ ಹೆಚ್ಚು ಗಮನಹರಿಸಿದ್ದಾರೆ ಎಂದು ಹಾರ್ದಿಕ್ ಪಟೇಲ್ ಅವರು ಮೇ 19 ರಂದು ರಾಜೀನಾಮೆ ನೀಡಿದ ಸಂದರ್ಭದಲ್ಲಿ ಕಿಡಿ ಕಾರಿದ್ದರು. ಇನ್ನೂ ಮುಂದುವರೆದು ಗುಜರಾತ್ ಕಾಂಗ್ರೆಸ್ ನಾಯಕರು ಎಸಿ ಚೇಂಬರ್‌ಗಳಲ್ಲಿ ಕುಳಿತು ತಮ್ಮ ರಾಜಕೀಯ ಪ್ರಯತ್ನಕ್ಕೆ ಅಡ್ಡಿಪಡಿಸಲು ಪ್ರಯತ್ನಿಸಿದರು ಎಂದು ಅವರು ಆರೋಪಿಸಿದ್ದಾರೆ.
ಏತನ್ಮಧ್ಯೆ, ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಜಗದೀಶ್ ಠಾಕೂರ್ ಅವರು ತಮ್ಮ ವಿರುದ್ಧ ದಾಖಲಾದ ದೇಶದ್ರೋಹದ ಪ್ರಕರಣಗಳಲ್ಲಿ ಜೈಲಿಗೆ ಹೋಗಬೇಕಾಗಬಹುದು ಎಂಬ ಭಯದಿಂದ ಪಟೇಲ್ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದಾರೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.