ಗಾಂಧಿನಗರ: ಗುಜರಾತ್ ನ ಪಾಟೀದಾರ್ ಮೀಸಲಾತಿ ಹೋರಾಟಗಾರ ಹಾರ್ದಿಕ್ ಪಟೇಲ್ ಇಂದು(ಮಂಗಳವಾರ) ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.


COMMERCIAL BREAK
SCROLL TO CONTINUE READING

ಪ್ರಭಾವಿ ಪಟಿದರ್ ನಾಯಕ ಮಾರ್ಚ್ 12 ರಂದು ತಾವು ಕಾಂಗ್ರೆಸ್ಗೆ ಸೇರಿಕೊಳ್ಳುವುದಾಗಿ ಭಾನುವಾರ ಘೋಷಿಸಿದ್ದಾರೆ. ಜೊತೆಗೆ 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಅಭಿಲಾಷೆ ವ್ಯಕ್ತಪಡಿಸಿರುವ ಅವರು, ಪಕ್ಷ ಬಯಸಿದರೆ ಮತ್ತು ಯಾವುದೇ ರೀತಿಯ ಕಾನೂನು ತೊಡಕುಗಳಿಲ್ಲದಿದ್ದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿದ್ದಾರೆ.


"ಸಮಾಜ ಮತ್ತು ದೇಶ ಸೇವೆ ನನ್ನ ಉದ್ದೇಶವಾಗಿದ್ದು, ಅದಕ್ಕೆ ಆಕಾರ ನೀಡನು ನಾನು ರಾಹುಲ್ ಗಾಂಧಿ ಮತ್ತು ಇತರ ಹಿರಿಯ ಮುಖಂಡರ ಉಪಸ್ಥಿತಿಯಲ್ಲಿ ಮಾರ್ಚ್ 12ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಬೇಕೆಂದು ನಿರ್ಧರಿಸಿದ್ದೇನೆ" ಎಂದು ಮಾರ್ಚ್ 10ರಂದು ಹಾರ್ದಿಕ್ ಪಟೇಲ್ ಟ್ವೀಟ್ ಮಾಡಿದ್ದರು.


"ಚುನಾವಣಾ ರಾಜಕೀಯದಲ್ಲಿ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ತೊಂದರೆಯಿಲ್ಲ ಮತ್ತು ಪಕ್ಷವು ನನಗೆ ಸ್ಥಾನ ನೀಡಲು ನಿರ್ಧರಿಸಿದರೆ ನಾನು ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ನಾನು ಭಾರತದ 125 ಕೋಟಿ ನಾಗರಿಕರಿಗೆ ಸೇವೆ ಸಲ್ಲಿಸಲು ಈ ಹಂತವನ್ನು ತೆಗೆದುಕೊಳ್ಳುತ್ತಿದ್ದೇನೆ" ಎಂದು ಅವರು ಮತ್ತೊಂದು ಟ್ವೀಟ್ನಲ್ಲಿ ಹೇಳಿದರು.


ಅದಾಗ್ಯೂ, ಭಾರತದ ಚುನಾವಣಾ ಆಯೋಗದ ವೇಳಾಪಟ್ಟಿಯನ್ನು ಘೋಷಿಸಿದ್ದು, ಕಾನೂನು ಅಡಚಣೆಗಳಿಂದ ಮುಕ್ತವಾದರೆ ಮಾತ್ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಪಟೇಲ್ ಅವರಿಗೆ ಸಾಧ್ಯವಿದೆ.