Chief Minister of Haryana : ನಯಾಬ್ ಸಿಂಗ್ ಸೈನಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ನಂತರ ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ, ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.
ಇಂದು ಸಂಜೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ನಯಾಬ್ ಸಿಂಗ್ ಸೈನಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸೈನಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು..
ಇದನ್ನು ಓದಿ :ರಂಜಾನ್ ಉಪವಾಸದಲ್ಲಿದ್ದೀರಾ ! ಶಕ್ತಿಯನ್ನು ಹಿಡಿದಿಡಲು ಈ ಸೂಪರ್ ಫುಡ್ ಗಳನ್ನು ಸೇವಿಸಿ
ಕೇಂದ್ರ ಸಚಿವ ಅರ್ಜುನ್ ಮುಂಡಾ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಬಿಪ್ಲಬ್ ದೇಬ್ ಅವರು ಸೈನಿ ಸಾಥ್ ನೀಡಿದರು
ಇದನ್ನು ಓದಿ :SSC Recruitment : 4187 'ಸಬ್ ಇನ್ಸ್ ಪೆಕ್ಟರ್' ಹುದ್ದೆಗಳಿಗೆ ಅರ್ಜಿ ಆಹ್ವಾನ
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಹರಿಯಾಣ ಮುಖ್ಯಮಂತ್ರಿಯನ್ನು ಬದಲಾಯಿಸಿರುವುದು ಅಚ್ಚರಿ ಮೂಡಿಸಿದೆ. ಅಕ್ಟೋಬರ್ನಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಕುರುಕ್ಷೇತ್ರದ ಸಂಸದ ನಯಾಬ್ ಸಿಂಗ್ ಸೈನಿ ಅವರು ಮಂಗಳವಾರ ಹರಿಯಾಣದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.