ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆ 2019 (Haryana Assembly Elections 2019) ರ ಹಿನ್ನೆಲೆಯಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯ ಅಧ್ಯಕ್ಷತೆಯನ್ನು ಬಿಜೆಪಿ ಕಾರ್ಯನಿರ್ವಾಹಕ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದಾರೆ. ಈ ಸಭೆಯಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಹರಿಯಾಣ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಹರಿಯಾಣ ಬಿಜೆಪಿ ಉಸ್ತುವಾರಿ ಅನಿಲ್ ಜೈನ್ ಕೂಡ ಭಾಗವಹಿಸಿದ್ದಾರೆ.


COMMERCIAL BREAK
SCROLL TO CONTINUE READING

ಚುನಾವಣಾ ಸಮಿತಿ ಸಭೆಯ ಮೊದಲು ನಡೆಯುತ್ತಿರುವ ಈ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಮತ್ತು ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುತ್ತಿದೆ.


ಇದಕ್ಕೂ ಮುನ್ನ ಮಂಗಳವಾರ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆ.ಪಿ.ನಡ್ಡಾ, ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಸುಖ್ಬೀರ್ ಬಾದಲ್ ಅವರನ್ನು ಭೇಟಿಯಾದರು. ಮೂಲಗಳ ಪ್ರಕಾರ, ರಾಜ್ಯದ ಮೈತ್ರಿ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆ ನಡೆಯಿತು. ಹರಿಯಾಣದಲ್ಲಿ 2 ಕ್ಷೇತ್ರಗಳನ್ನೂ ಅಕಾಲಿ ದಳಕ್ಕೆ ನೀಡಲು ಬಿಜೆಪಿ ಬಯಸಿದೆ ಎಂದು ಮೂಲಗಳು ತಿಳಿಸಿವೆ.


ಮತ್ತೊಂದೆಡೆ, ಶಿರೋಮಣಿ ಅಕಾಲಿ ದಳ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಸೋಮವಾರ, ಶಿರೋಮಣಿ ಅಕಾಲಿ ದಳದ ನಾಯಕರು ವಿಧಾನಸಭಾ ಚುನಾವಣೆಗೆ ಪಕ್ಷದ ಸ್ಪರ್ಧಿಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಕುರುಕ್ಷೇತ್ರದ ಸ್ಟರ್ಲಿಂಗ್ ರೆಸಾರ್ಟ್‌ಗೆ ಆಗಮಿಸಿದರು.