Haryana CM Manohar Lal Khattar Resigns: 2024ರ ಲೋಕಸಭಾ ಚುನಾವಣೆಗೂ ಮೊದಲು ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಹರಿಯಾಣದಲ್ಲಿ ಬಿಜೆಪಿ-ಜೆಜೆಪಿ ಮೈತ್ರಿ ಬಹುತೇಕ ಮುರಿದು ಬಿದ್ದಿದ್ದು, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಇಡೀ ಸಚಿವ ಸಂಪುಟದ ಸಚಿವರೂ ಕೂಡ ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. 


ಮುಂಬರುವ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಹಿನ್ನಲೆಯಲ್ಲಿ ಹರಿಯಾಣದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಜನನಾಯಕ ಜನತಾ ಪಕ್ಷ (ಜೆಜೆಪಿ)ದ ನಡುವೆ ಬಿರುಕು ಮೂಡಿದ್ದೆ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರ ಪತನಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. 


ಇದನ್ನೂ ಓದಿ- CAA: ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಲು ಇಲ್ಲಿದೆ ಸುಲಭ ಮಾರ್ಗ


ಇನ್ನೂ ಬಿಜೆಪಿ-ಜೆಜೆಪಿ ಮೈತ್ರಿ ಸರ್ಕಾರ ಬೆನ್ನಲ್ಲೇ ಬಿಜೆಪಿ ಸರ್ಕಾರ ರಚನೆಗೆ ಮುಂದಾಗಿದ್ದು ಕೆಲ ಹೊತ್ತಿನಲ್ಲೇ  ಬಿಜೆಪಿಯ ರಾಜ್ಯಾಧ್ಯಕ್ಷ ನಯಾಬ್ ಸೈನಿ ಹರಿಯಾಣದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ವರದಿ ಮಾಡಿವೆ. 


ಇದನ್ನೂ ಓದಿ- CAA ಜಾರಿಗೊಳಿಸಿದ Modi Government, ಏನಿದು ಸಿಎಎ, ಇಲ್ಲಿದೆ ಅದರ ಕಂಪ್ಲೇಟ್ ಮಾಹಿತಿ


ಹರಿಯಾಣ ವಿಧಾನಮಂಡಲದ ಸಂಖ್ಯಾಬಲ: 
90 ಸದಸ್ಯ ಬಲದ ಹರಿಯಾಣ ಅಸೆಂಬ್ಲಿಯಲ್ಲಿ ಬಿಜೆಪಿ 41 ಶಾಸಕರನ್ನು ಹೊಂದಿದೆ ಮತ್ತು ಐದು ಸ್ವತಂತ್ರ ಶಾಸಕರ ಬೆಂಬಲವನ್ನು ಹೊಂದಿದೆ. ಸದನದಲ್ಲಿ ಜೆಜೆಪಿ 10 ಶಾಸಕರನ್ನು ಹೊಂದಿದ್ದರೆ ಕಾಂಗ್ರೆಸ್ 30 ಶಾಸಕರನ್ನು ಹೊಂದಿದೆ. ಇದೀಗ ಸರ್ಕಾರ ರಚನೆಗೆ ಬಹುಮತ ಕೊರತೆ ಹೊಂದಿರುವ ಬಿಜೆಪಿಗೆ ಐದು ಸ್ವತಂತ್ರ ಶಾಸಕರ ಬೆಂಬಲ ಇರುವುದರಿಂದ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಹೇಳಲಾಗುತ್ತಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.