ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ ವಿಚಾರ: ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್

Tamil Nadu government: ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂಕೋರ್ಟ್ ನಿಂದ ತೀರ್ಪು ಬರುವ ಮುನ್ನವೇ ಅವರ ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

Written by - Bhavya Sunil Bangera | Edited by - Bhavishya Shetty | Last Updated : Mar 5, 2024, 04:20 PM IST
    • ಜಯಲಲಿತಾ ಜಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಪ್ರಕ್ರಿಯೆ
    • ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠದಿಂದ ಆದೇಶ
    • ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆ
ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ ವಿಚಾರ: ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್ title=
J Jayalalitha

Former Tamil Nadu Chief Minister J Jayalalitha: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಜಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿದೆ. ಜಯಲಲಿತಾ ಮಗಳು ಜೆ.ದೀಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಇದನ್ನೂ ಓದಿ: ಅಭಿಮಾನಿಗಳ ನಿಶ್ಕಲ್ಮಶ ಅಭಿಮಾನಕ್ಕೆ ಮನಸೋತ RCB: ಈ ರೀತಿ ಕೃತಜ್ಞತೆ ಸಲ್ಲಿಸಿದ ಆಟಗಾರ್ತಿಯರು

ಅಲ್ಲದೆ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಮಾ.26 ಕ್ಕೆ ಮುಂದೂಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಜಯಲಲಿತಾ ವಿರುದ್ದದ ಭ್ರಷ್ಟಾಚಾರ ಆರೋಪ ಸಂಬಂಧ ಸುಪ್ರೀಂಕೋರ್ಟ್ ನಿಂದ ತೀರ್ಪು ಬರುವ ಮುನ್ನವೇ ಅವರ ಮೃತರಾಗಿದ್ದರು. ಆದ ಕಾರಣ ಅವರನ್ನು ಆರೋಪ ಮುಕ್ತರು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದ್ದರಿಂದ, ಅರ್ಜಿದಾರರು ಜಯಲಲಿತಾರ ಕಾನೂನುಬದ್ಧ ವಾರಸುದಾರರಾಗಿದ್ದು, ಅವರ ಎಲ್ಲಾ ಚಿನ್ನಾಭರಣಗಳನ್ನು ಅರ್ಜಿದಾರರಿಗೆ ಹಸ್ತಾಂತರ ಮಾಡಬೇಕು ಎಂದು ಕೋರಿದರು.

ಇದನ್ನೂ ಓದಿ: ಬಾಳೆ ಎಲೆಯನ್ನು ಈ ರೀತಿ ಬಳಸಿದರೆ ಸಾಕು… ಬಿಳಿಕೂದಲನ್ನು ಬುಡದಿಂದಲೇ ಶಾಶ್ವತವಾಗಿ ಕಪ್ಪಾಗಿಸಬಹುದು!

ಈ ವಾದ ದಾಖಲಿಸಿಕೊಂಡ ನ್ಯಾಯಪೀಠ, ನಗರದ ವಿಶೇಷ ನ್ಯಾಯಾಲಯದಿಂದ ತಮಿಳುನಾಡು ಸರ್ಕಾರಕ್ಕೆ ನಾಳೆಯಿಂದ ನಡೆಯಬೇಕಿದ್ದ ಚಿನ್ನಾಭರಣಗಳ ಹಸ್ತಾಂತರ ಪ್ರಕ್ರಿಯೆಗೆ ತಡೆ ನೀಡಿ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News