ಬೆಂಗಳೂರು: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನಾಳೆ (ಜನವರಿ 19) ಕೋಲ್ಕತದಲ್ಲಿ ಆಯೋಜಿರುವ ವಿರೋಧ ಪಕ್ಷಗಳ ಬೃಹತ್ ರ‍್ಯಾಲಿಯಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖ್ಯಸ್ಥ ಹೆಚ್.ಡಿ. ದೇವೇಗೌಡ ಹಾಗೂ ಕರ್ನಾಟಕ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.


COMMERCIAL BREAK
SCROLL TO CONTINUE READING

ಈ ಉದ್ದೇಶಕ್ಕಾಗಿ ದೇವೇಗೌಡರು ಈಗಾಗಲೇ ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದು, ಸಿಎಂ ಕುಮಾರಸ್ವಾಮಿ ಇಂದು ಸಂಜೆ ವಿಶೇಷ ವಿಮಾನದಲ್ಲಿ ಕೊಲ್ಕತ್ತಾಗೆ ತೆರಳಲಿದ್ದಾರೆ. ರ‍್ಯಾಲಿಯ ಬಳಿಕ ದೇವೇಗೌಡರು ದೆಹಲಿಗೆ ತೆರಳುವ ಸಾಧ್ಯತೆಯಿದೆ. 


ವಿರೋಧ ಪಕ್ಷಗಳ ಈ ಬೃಹತ್ ರ‍್ಯಾಲಿಯನ್ನು ಈಗಾಗಲೆ ಮಮತಾ ಬ್ಯಾನರ್ಜಿ ಬಿಜೆಪಿ ಪಾಲಿಗೆ ಸಾವಿನ ಗಂಟೆ ಎಂದು ಬಣ್ಣಿಸಿದ್ದು ಸುಮಾರು 40 ಲಕ್ಷಕ್ಕೂ ಅಧಿಕ ಮಂದಿ ಈ ರ‍್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎನ್ನಲಾಗಿದೆ.