ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಕರ್ನಾಟಕ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಟ್ರಬಲ್ ಶೂಟರ್  ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ಇಂದು ತೀರ್ಪು ನೀಡಲಿದೆ. ದಸರಾ ಹಬ್ಬದ ಕಾರಣದಿಂದಾಗಿ ಮುಂದೂಡಲಾಗಿದ್ದ ವಿಚಾರಣೆಯನ್ನು ಇಂದು ಮುಂದುವರೆಸಲಿದ್ದು, ಇಂದು ತೀರ್ಪು ಪ್ರಕಟಿಸಲಿದೆ. 


ದೆಹಲಿಯ ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ ವಿಚಾರಣೆ ನಡೆಸಲಿದ್ದು, ಡಿಕೆಶಿ ಅವರಿಗೆ ಜಾಮೀನು ಸಿಗಲಿದೆಯೇ ಎಂದು ಕಾದು ನೋಡಬೇಕಿದೆ.


ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಡಿ.ಕೆ.ಶಿವಕುಮಾರ್‌ರನ್ನು ಸೆಪ್ಟೆಂಬರ್ 3ರಂದು ಬಂಧಿಸಿತ್ತು. ಬಳಿಕ ಸೆ.4ರಿಂದಲೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. ಒಂದು ವೇಳೆ ಜಾಮೀನು ಸಿಗದಿದ್ದಲ್ಲಿ ಡಿಕೆಶಿ ತಿಹಾರ್ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಮುಂದುವರಿಯಲಿದೆ.