ಹಿಮಾಚಲದಲ್ಲಿ ಮಳೆ, ಪ್ರವಾಹ, ಭೂಕುಸಿತದಿಂದ ಭಾರೀ ವಿನಾಶ : 74 ಮಂದಿ ಸಾವು

Himachal Pradesh rain flood latest: ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಈ ಗುಡ್ಡಗಾಡು ಪ್ರದೇಶದಲ್ಲಿ ಪರಿಸ್ಥಿತಿಯಿಂದಾಗಿ ಹದಗೆಟ್ಟಿದೆ.   

Written by - Ranjitha R K | Last Updated : Aug 18, 2023, 10:09 AM IST
  • ಎತ್ತ ನೋಡಿದರೂ ಸಾವು - ನೋವು
  • ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
  • 31 ಕೋಟಿಗೂ ಹೆಚ್ಚು ಹಾನಿಯಾಗಿದೆ.
ಹಿಮಾಚಲದಲ್ಲಿ ಮಳೆ, ಪ್ರವಾಹ, ಭೂಕುಸಿತದಿಂದ ಭಾರೀ ವಿನಾಶ : 74  ಮಂದಿ ಸಾವು  title=

Himachal Pradesh rain flood latest : ಹಿಮಾಚಲ ಪ್ರದೇಶದ ಶಿವ ದೇವಾಲಯದ ಅವಶೇಷಗಳಿಂದ ಮತ್ತೊಂದು ದೇಹವನ್ನು ಹೊರತೆಗೆಯಲಾಗಿದೆ. ಚಂಬಾ ಜಿಲ್ಲೆಯಲ್ಲಿ ಇನ್ನಿಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ರಾಜ್ಯದಲ್ಲಿ ಮಳೆ, ಪ್ರವಾಹ ಮತ್ತು ಭೂಕುಸಿತಕ್ಕೆ ಪ್ರಾಣ ಕಳೆದುಕೊಂಡವರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಶಿಮ್ಲಾವೊಂದರಲ್ಲೇ, 21 ಜನರು ಸಾವನ್ನಪ್ಪಿದ್ದಾರೆ. ದೇವಾಲಯದ ಅವಶೇಷಗಳಡಿಯಲ್ಲಿ ಇನ್ನೂ ಎಂಟು ಮಂದಿ ಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ, ಈ ಗುಡ್ಡಗಾಡು ಪ್ರದೇಶದಲ್ಲಿ ಪರಿಸ್ಥಿತಿಯಿಂದಾಗಿ ಹದಗೆಟ್ಟಿದೆ. 

ಎತ್ತ ನೋಡಿದರೂ ಸಾವು - ನೋವು : 
ಹಿಮಾಚಲ ಪ್ರದೇಶದಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಅಲ್ಲಲ್ಲಿ  ಭೂಕುಸಿತ ಸಂಭವಿಸುತ್ತಿದೆ. ನೂರಾರು ಮನೆಗಳು ನೆಲಸಮಗೊಂಡಿವೆ. ಶತಮಾನದ ಅತಿ ದೊಡ್ಡ ದುರಂತದಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಶಿಮ್ಲಾದ ಹಲವು ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಶಿವ ಮಂದಿರದಲ್ಲಿ ಅಪಘಾತ ಸಂಭವಿಸಿ 4 ದಿನ ಕಳೆದರೂ ವಿಪತ್ತು ನಿರ್ವಹಣಾ ತಂಡ ಹಾಗೂ ಸೇನೆ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ. ಇದರೊಂದಿಗೆ ಅವಶೇಷಗಳಡಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯವೂ ನಡೆಯುತ್ತಿದೆ. 

ಇದನ್ನೂ ಓದಿ : ಮಣಿಪುರ ಮಹಿಳೆಯರ ನೋವು ಪ್ರಧಾನಿಗೆ ಅರ್ಥವಾಗುತ್ತಿಲ್ಲ: ಶರದ್ ಪವಾರ್

ಮಂಡಿ ಜಿಲ್ಲೆಯಲ್ಲೂ ಅಪಾಯ : 
ಮಂಡಿ ಜಿಲ್ಲೆಯಲ್ಲೂ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಇಲ್ಲಿನ ನಾಲ್ಕು ಅಂತಸ್ತಿನ ಜಲಶಕ್ತಿ ಇಲಾಖೆ ಕಟ್ಟಡ ಅಪಾಯದಲ್ಲಿದೆ. ಕಟ್ಟಡದ ಎಲ್ಲಾ 100 ಕೊಠಡಿಗಳಲ್ಲಿ ದೊಡ್ಡ ಬಿರುಕುಗಳು ಕಾಣಿಸಿಕೊಂಡಿವೆ. ಅಪಘಾತ ಯಾವಾಗ ಬೇಕಾದರೂ ಸಂಭವಿಸಬಹುದು ಎಂದು ಹೇಳಲಾಗುತ್ತಿದೆ. ಆಡಳಿತದ ಪ್ರಕಾರ ಜಿಲ್ಲೆಯಲ್ಲಿ ಇದುವರೆಗೆ 267 ಮನೆಗಳಿಗೆ ಹಾನಿಯಾಗಿದ್ದು, 31 ಕೋಟಿಗೂ ಹೆಚ್ಚು ಹಾನಿಯಾಗಿದೆ.

ಕುಲುವಿನಲ್ಲಿ ಜನಜೀವನ ಅಸ್ತವ್ಯಸ್ತ :
ಹಿಮಾಚಲ ಪ್ರದೇಶದ ಕುಲುವಿನಲ್ಲಿ ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಲುವಿನಲ್ಲಿ ರಸ್ತೆಗಳು ಹದಗೆಟ್ಟ ಕಾರಣ, ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯನ್ನು ನಿಲ್ಲಿಸಲಾಗಿದೆ.  ಪರ್ಯಾಯ ಮಾರ್ಗದಲ್ಲಿ ತೈಲ ಟ್ಯಾಂಕರ್‌ಗಳನ್ನು ಕಳುಹಿಸುವ ಪ್ರಯತ್ನ ನಡೆಯುತ್ತಿದೆ. 

ಇದನ್ನೂ ಓದಿ : ಚುನಾವಣೆ ಘೋಷಣೆಗೂ ಮುನ್ನವೇ  ಛತ್ತೀಸ್‌ಗಢ, ಮಧ್ಯಪ್ರದೇಶದ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿಜೆಪಿ

ಚಂಬಾದ  ಸ್ಥಿತಿ ಏನು ? : 
ಚಂಬಾ ಜಿಲ್ಲೆಯಲ್ಲೂ ಮಳೆ ಮತ್ತು ಭೂಕುಸಿತದಿಂದ ಸಾಕಷ್ಟು ಹಾನಿಯಾಗಿದೆ. ಜನರ ಜಮೀನುಗಳು ನೀರಿನಿಂದ ಮುಳುಗಿ ಹೋಗಿವೆ. 25ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ಕಾರಣ, ಹಲವೆಡೆ ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News