Tamil Nadu School Holiday: ಕರ್ನಾಟಕದ ನೆರೆಯ ರಾಜ್ಯ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿನ ನಾಗಪಟ್ಟಿಣಂ, ಕಿಲ್ವೇಲೂರು ತಾಲೂಕು, ವಿಲುಪ್ಪುರಂ, ಕಡಲೂರು, ರಾಣಿಪೇಟ್, ವೆಲ್ಲೂರು ಮತ್ತು ತಿರುವಣ್ಣಾಮಲೈ ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಇಡೀ ತಮಿಳುನಾಡಿನಾದ್ಯಂತ ಕಳೆದ 24 ಗಂಟೆಗಳಿಂದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿನ ನಾಗಪಟ್ಟಿಣಂ ಜಿಲ್ಲೆಯಲ್ಲಿ ಜನವರಿ 7 ರಿಂದ ಜನವರಿ 8 ರವರೆಗೆ 16.7 ಸೆಂ.ಮೀ ಮಳೆಯಾಗಿದೆ. ಇದಲ್ಲದೆ, ಕಾರೈಕಲ್ (12.2 ಸೆಂ.ಮೀ.), ಪುದುಚೇರಿ (9.6 ಸೆಂ.ಮೀ.), ಕಡಲೂರು (9.3 ಸೆಂ.ಮೀ.) ಮತ್ತು ಎನ್ನೋರ್ (9.2 ಸೆಂ.ಮೀ) ಮಳೆ ವರದಿಯಾಗಿದೆ. 


ಇಷ್ಟು ಮಾತ್ರವಲ್ಲದೆ, ಕುಲಸಚಿವರು ಹೊರಡಿಸಿರುವ ಒಂದು ಅಧಿಸೂಚನೆಯ ಪ್ರಕಾರ, ಭಾರೀ ಮಳೆಯಿಂದಾಗಿ ವಿಶ್ವವಿದ್ಯಾನಿಲಯ ಮತ್ತು ಅದರ ಸಂಯೋಜಿತ ಕಾಲೇಜುಗಳಲ್ಲಿ ಜನವರಿ 8 ರಂದು ನಿಗದಿಯಾಗಿದ್ದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆಯ ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ತಿಳಿದುಬಂದಿದೆ. 


ಇದನ್ನೂ ಓದಿ- KPSC JOBS ALEART: ಶೀಘ್ರವೇ ವಿವಿಧ ಇಲಾಖೆಗಳ 1,900 ಹುದ್ದೆಗಳ ನೇಮಕಾತಿ


ಪುದುಚೇರಿಯಲ್ಲಿ ಶಾಲೆಗಳಿಗೆ ರಜೆ: 
ಪುದುಚೇರಿಯಲ್ಲಿ ಭಾರೀ ಮಳೆಯಿಂದಾಗಿ ಪುದುಚೇರಿ ಸರ್ಕಾರವು ಜನವರಿ 8 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. 


ಟ್ರಾಫಿಕ್ ಜಾಮ್ ಸಮಸ್ಯೆಗೂ ಕಾರಣವಾದ ಭಾರೀ ಮಳೆ: 
ಇನ್ನೂ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭಾನುವಾರ ಸಂಜೆ ತಮಿಳುನಾಡಿನ ಕೆಲವು ಭಾಗಗಳಲ್ಲಿ  ಟ್ರಾಫಿಕ್ ಜಾಮ್ ಕಂಡುಬಂದಿದೆ. 


ಪ್ರವಾಹ ಪರಿಸ್ಥಿತಿ: 
ಶನಿವಾರವೂ ಪಶ್ಚಿಮ ಘಟ್ಟದಲ್ಲಿ ಸುರಿದ ಭಾರಿ ಮಳೆಯಿಂದಾಗಿ ತಮಿಳುನಾಡಿನ ತೆಂಕಶಿ ಪರ್ವತ ಶ್ರೇಣಿಯ ತಪ್ಪಲಿನಲ್ಲಿರುವ ಹಳೆಯ ಕುರ್ಟಾಲಂ ಜಲಪಾತದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಪ್ರದೇಶದಲ್ಲಿ ಭಾರೀ ಪ್ರವಾಹದ ಕಾರಣ, ಜಿಲ್ಲೆಯ ಪ್ರಮುಖ ಪ್ರವಾಸಿ ಆಕರ್ಷಣೆಯಾಗಿರುವ ಹಳೆಯ ಕುರ್ಟಾಲಂ ಜಲಪಾತದ ಪಕ್ಕದ ಜಲಪಾತಗಳ ಬಳಿ ಪ್ರವಾಸಿಗರು ನೀರಿಗೆ ಇಳಿಯುವುದನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ- ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಮೂವರು ಸಚಿವರನ್ನು ವಜಾಗೊಳಿಸಿದ ಮಾಲ್ಡೀವ್ಸ್!


ಐಎಂಡಿ ಮುನ್ಸೂಚನೆ: 
ಮುಂದಿನ ಏಳು ದಿನಗಳ ಕಾಲ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ  ಮತ್ತು ಹವಾಮಾನ ಕಚೇರಿಯು ಭಾನುವಾರ ರಾಜ್ಯದ ಹತ್ತು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಚೆನ್ನೈನಲ್ಲಿರುವ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ವಿಲ್ಲುಪುರಂ, ತಿರುವಣ್ಣಾಮಲೈ, ರಾಣಿಪೇಟ್, ವೆಲ್ಲೂರು, ತಿರುವಳ್ಳೂರು, ಚೆನ್ನೈ, ರಾಮನಾಥಪುರಂ, ತೂತುಕುಡಿ ಮತ್ತು ತಿರುನಲ್ವೇಲಿ ಜಿಲ್ಲೆಗಳು ಮತ್ತು ಪುದುಚೇರಿಯ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತನ್ನ ನಿಯಮಿತ ಬುಲೆಟಿನ್‌ನಲ್ಲಿ ಮಾಹಿತಿ ನೀಡಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.