Weather News Today : ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ, ಪೂರ್ವ ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ತೆಲಂಗಾಣ, ಛತ್ತೀಸ್‌ಗಢ ಮತ್ತು ಒಡಿಶಾದ ಕೆಲವು ಭಾಗಗಳು ಮತ್ತು  ಮಹಾರಾಷ್ಟ್ರದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ. ಬಾಂಗ್ಲಾದೇಶದ ಕೆಲವು ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಂಡಮಾರುತ ಬೀಸುವ ಸಾಧ್ಯತೆ ಇದೆ. 


COMMERCIAL BREAK
SCROLL TO CONTINUE READING

ಹವಾಮಾನ ಮತ್ತೆ ಬದಲಾಗುತ್ತದೆ : 
ಸ್ಕೈಮೆಟ್ ಹವಾಮಾನ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ಸೇರಿದಂತೆ ಈಶಾನ್ಯ ಭಾರತದ ಕೆಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ. ಇದಲ್ಲದೆ ಬಿಹಾರ, ಒಡಿಶಾ ಮತ್ತು ಜಾರ್ಖಂಡ್‌ನ ಕೆಲವು ಪ್ರದೇಶಗಳಲ್ಲಿ ಲಘು ಮಳೆಯಾಗಲಿದೆ. ಈ ಕಾರಣದಿಂದಾಗಿ, ವಾಯುವ್ಯ ಮತ್ತು ಮಧ್ಯ ಭಾರತದಾದ್ಯಂತ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆ ದಾಖಲಾಗಿದೆ.


ಇದನ್ನೂ ಓದಿ : Assembly Election 2023: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಿರುವ ಚುನಾವಣಾ ಆಯೋಗ


ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆಗಳಿವೆ? : 
ಮುಂದಿನ 24 ಗಂಟೆಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅಸ್ಸಾಂ, ಅರುಣಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ಸಮಯದಲ್ಲಿ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಲ್ಲೂ ಮಳೆಯಾಗಲಿದೆ. 


ಸಿಕ್ಕಿಂನಲ್ಲಿ ಪ್ರವಾಹ ಪರಿಸ್ಥಿತಿ : 
ಇನ್ನು ಸಿಕ್ಕಿಂನಲ್ಲಿ ಪ್ರವಾಹದಿಂದಾಗಿ ಇದುವರೆಗೆ 26 ಜನರು ಸಾವನ್ನಪ್ಪಿದ್ದು,  141 ಜನ ನಾಪತ್ತೆಯಾಗಿದ್ದಾರೆ. ಪ್ರವಾಸಿಗರು ಇನ್ನೂ ಹಲವೆಡೆ ಸಿಕ್ಕಿಹಾಕಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ನದಿಯು ತುಂಬಿ ಹರಿಯುತ್ತಿದ್ದು, ಐಟಿಬಿಪಿ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ  ಸಾಗಿಸುತ್ತಿದೆ. ಇಲ್ಲಿಯವರೆಗೆ  2 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. 


ಇದನ್ನೂ ಓದಿ : ತಮಿಳುನಾಡಿನಲ್ಲಿ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ; ಸಾವಿಗೆ ಕಾರಣವೇನು ಗೊತ್ತೆ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.


Tamil Nadumedical studentKanyakumariSuicide case