Delhi Rain : ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆ : ಹಲವು ಪ್ರದೇಶಗಳು ಜಲಾವೃತ
ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳ ರಸ್ತೆಗಳು ಸಂಪೂರ್ಣವಾಗಿ ನೀರಿನಿಂದ ಮುಳುಗಿ ಹೋಗಿವೆ. ಮಧು ವಿಹಾರ್ ಪ್ರದೇಶದಲ್ಲಿ ಬಸ್ ಸಿಲುಕಿಕೊಂಡಿದೆ.
ನವದೆಹಲಿ : ಭಾರೀ ಮಳೆಗೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದೆ. ದೆಹಲಿ-ಎನ್‌ಸಿಆರ್‌ನಲ್ಲಿ ಬೆಳಿಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದೆ (Delhi Rain). ಮಳೆಯಿಂದಾಗಿ, ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ರಸ್ತೆಗಳಲ್ಲಿ ನೀರು ತುಂಬಿದ್ದು, ಎಲ್ಲೆಡೆ ಟ್ರಾಫಿಕ್ ಜಾಮ್ (Traffic jam) ಕಂಡು ಇದೆ.
ದೆಹಲಿಯ ಹಲವು ರಸ್ತೆಗಳು ಜಲಾವೃತ :
ದೆಹಲಿಯ ರಾಮಲೀಲಾ ಮೈದಾನ ಪ್ರದೇಶ ಮಳೆಯಿಂದಾಗಿ (Delhi rain) ಸಂಪೂರ್ಣ ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ತುಂಬಿರುವುದರಿಂದ ಸಂಚಾರದ ವೇಗಕ್ಕೆ ಬ್ರೇಕ್ ಹಾಕಲಾಗಿದೆ. ನೀರು ನಿಂತಿರುವುದರಿಂದ ಚಾಲಕರು ಸಮಸ್ಯೆಗಳನ್ನು ಎದುರಿಸುವಂತಾಯಿತು.
ಇದನ್ನೂ ಓದಿ : Aadhaar Card: ವಾಹನದ ಸಂಖ್ಯೆಯಂತೆ, ಈಗ ಆಧಾರ್ ಸಂಖ್ಯೆಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತಾ? UIDAI ನೀಡಿದೆ ಈ ಮಾಹಿತಿ
ಮಳೆ ನೀರಿನಲ್ಲಿ ಸಿಲುಕಿಹಾಕಿಕೊಂಡಿರುವ ಬಸ್ :
ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳ ರಸ್ತೆಗಳು ಸಂಪೂರ್ಣವಾಗಿ ನೀರಿನಿಂದ ಮುಳುಗಿ ಹೋಗಿವೆ. ಮಧು ವಿಹಾರ್ (Madhu vihar) ಪ್ರದೇಶದಲ್ಲಿ ಬಸ್ ಸಿಲುಕಿಕೊಂಡಿದೆ. ರಸ್ತೆಗಳಲ್ಲಿ ನೀರು ತುಂಬಿರುವುದರಿಂದ ಹಲವು ಬಸ್‌ಗಳು ರಸ್ತೆ ಮಧ್ಯೆಯೇ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಮಿಂಟೋ ಸೇತುವೆಯ ಸುತ್ತಮುತ್ತಲಿನ ಪ್ರದೇಶವು ನೀರಿನ ಸಂಗ್ರಹದಿಂದಾಗಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿದೆ. ಇಲ್ಲಿ ನೀರು ಮೊಣಕಾಲಿನವರೆಗೂ ನೀರು ನಿಂತಿರುವುದು ಕಂಡು ಬಂತು.
IMD) ದೆಹಲಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದೆಹಲಿಯಲ್ಲಿ ಮಳೆ ಜೊತೆ ಭಾರೀ ಗಾಳಿ ಕೂಡಾ ಬೀಸುತ್ತಿದೆ. ಮಳೆಯ ನಂತರ ದೆಹಲಿಯ ಸುಪ್ರೀಂ ಕೋರ್ಟ್ (Suprem court) ರಸ್ತೆಯಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ.
ಇದನ್ನೂ ಓದಿ : IRCTC Tickets Booking: ರೈಲು ಟಿಕೆಟ್ ಕಾಯ್ದಿರಿಸುವ ಪ್ರಕ್ರಿಯೆಯಲ್ಲಿ ಬದಲಾವಣೆ, ಈಗ ಟಿಕೆಟ್ ಬುಕಿಂಗ್‌ಗೆ ಈ ದಾಖಲೆಗಳು ಅತ್ಯಗತ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.