ಮುಂಬೈ: ಮುಂಬೈ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮಂಗಳವಾರ ಭವಿಷ್ಯ ನುಡಿದಿದೆ.


COMMERCIAL BREAK
SCROLL TO CONTINUE READING

ಹವಾಮಾನ ಮುನ್ಸೂಚನೆ ಪ್ರಕಾರ, ಛತ್ತೀಸ್‌ಗಢ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ಗುಜರಾತ್, ವಿದರ್ಭ, ಮಧ್ಯಪ್ರದೇಶ ಮತ್ತು ನಾಗಾಲ್ಯಾಂಡ್‌ಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.


ಇದಲ್ಲದೆ ಮುಂದಿನ ಮೂರು ಗಂಟೆಗಳಲ್ಲಿ ಹಿಮಾಚಲ ಪ್ರದೇಶದಲ್ಲಿ, ಕುಲ್ಲು, ಮಂಡಿ, ಕಾಂಗ್ರಾ, ಬಿಲಾಸ್ಪುರ್, ಸಿರ್ಮೌರ್, ಸೋಲನ್ ಮತ್ತು ಶಿಮ್ಲಾದಲ್ಲೂ ಕೂಡ ಮಳೆಯಾಗುವ ಬಗ್ಗೆ ಐಎಂಡಿ ಎಚ್ಚರಿಸಿದೆ.


ಈಶಾನ್ಯ ಭಾಗಗಳಲ್ಲಿ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲೂ ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ.


ಗುಜರಾತ್ ಕರಾವಳಿಯಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದ್ದು, ಮುಂದಿನ ಕೆಲವು ದಿನಗಳವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸಂಸ್ಥೆ ಸಲಹೆ ನೀಡಿದೆ.