close

News WrapGet Handpicked Stories from our editors directly to your mailbox

Watch: ಧಾರಾಕಾರ ಮಳೆಗೆ ತತ್ತರಿಸಿದ ಕೊಚ್ಚಿ

ಕೇರಳದ ಹಲವೆಡೆ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಸಿದೆ.

Yashaswini V Yashaswini V | Updated: Oct 21, 2019 , 12:08 PM IST
Watch: ಧಾರಾಕಾರ ಮಳೆಗೆ ತತ್ತರಿಸಿದ ಕೊಚ್ಚಿ
Photo Courtesy: ANI

ಕೊಚ್ಚಿ (ಕೇರಳ): ಭಾರಿ ಮಳೆಯಿಂದಾಗಿ  ಕೇರಳದ ಕೊಚ್ಚಿ ತತ್ತರಿಸಿದ್ದು, ನಗರದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಎರ್ನಾಕುಲಂ, ತಿರುವನಂತಪುರಂ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಮಲಪ್ಪುರಂ ಮತ್ತು ಪಾಲಕ್ಕಾಡ್ ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿರುವ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಆರೆಂಜ್ ಅಲರ್ಟ್ ಘೋಷಿಸಿದೆ.

ಮುಂದಿನ ಎರಡು ದಿನ ಧಾರಾಕಾರ ಮಳೆಯಾಗುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಏತನ್ಮಧ್ಯೆ, ರಾಜ್ಯದ ವಾಟಿಯೂರ್ಕಾವ್, ಅರೂರ್, ಕೊನ್ನಿ, ಎರ್ನಾಕುಲಂ ಮತ್ತು ಮಂಜೇಶ್ವರಂ ವಿಧಾನಸಭಾ ಕ್ಷೇತ್ರಗಳಿಗೆ  ಉಪಚುನಾವಣೆ ನಡೆಯುತ್ತಿದೆ. ಅಕ್ಟೋಬರ್ 24 ರಂದು ಮತಗಳನ್ನು ಎಣಿಸಲಾಗುವುದು.