ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ : IMD ಎಚ್ಚರಿಕೆ

 ಮುಂದಿನ ಕೆಲವು ದಿನಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಭಾರೀ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. 

Written by - Ranjitha R K | Last Updated : Jun 28, 2022, 08:35 AM IST
  • ಮುಂದಿನ ಐದು ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ
  • 9 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ
  • ಕೆಲವು ರಾಜ್ಯಗಳಲ್ಲಿ ಲಘು ಮಳೆಯ ಮುನ್ಸೂಚನೆ
ಕರ್ನಾಟಕ ಸೇರಿ 9 ರಾಜ್ಯಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆ :  IMD ಎಚ್ಚರಿಕೆ  title=
IMD Alert (file photo)

ನವದೆಹಲಿ : ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಮುಂಗಾರು ಪ್ರವೇಶವಾಗಿದೆ. ಅನೇಕ ರಾಜ್ಯಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. , ಮುಂದಿನ ಕೆಲವು ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

9 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ :
ಮುಂದಿನ ಕೆಲವು ದಿನಗಳಲ್ಲಿ ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ ಮತ್ತು ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ಮುಂದಿನ 5 ದಿನಗಳ ಕಾಲ ಗೋವಾದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದಲ್ಲದೇ ಗುಜರಾತ್, ಕರ್ನಾಟಕ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲೂ ಭಾರೀ ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. 

ಇದನ್ನೂ ಓದಿ : Building collapses in Mumbai: ಮುಂಬೈನ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ

ಈ ರಾಜ್ಯಗಳಲ್ಲಿ ಲಘು ಮಳೆಯ ಮುನ್ಸೂಚನೆ :
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಜೂನ್ 28 ರಿಂದ 30 ರವರೆಗೆ ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ. ಆದರೆ ಜೂನ್ 29-30 ರಂದು ಪಂಜಾಬ್, ಹರಿಯಾಣ ಮತ್ತು ದೆಹಲಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಮುಂಗಾರು ಮಳೆಗಾಗಿ ಕಾಯಬೇಕಾಗಿದೆ :
ಆದರೆ ರಾಷ್ಟ್ರ ರಾಜಧಾನಿ ದೆಹಲಿಗೆ ಮಾನ್ಸೂನ್ ಆಗಮನದ ದಿನಾಂಕವನ್ನು IMD ಇನ್ನೂ ನಿಗದಿಪಡಿಸಿಲ್ಲ. ಆದರೆ ಮಾನ್ಸೂನ್ ಜೂನ್ 29 ರೊಳಗೆ ವಾಯುವ್ಯ ಭಾರತವನ್ನು ಮತ್ತು ಜುಲೈ 6 ರೊಳಗೆ ಇಡೀ ದೇಶವನ್ನು ಆವರಿಸುತ್ತದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜೂನ್ 29 ರಿಂದ ದೆಹಲಿಯಲ್ಲಿ ಮತ್ತೆ ಮಳೆಯಾಗಲಿದ್ದು, ಜೂನ್ 30 ಅಥವಾ ಜುಲೈ 1 ರ ವೇಳೆಗೆ ಮುಂಗಾರು ದೆಹಲಿಯನ್ನು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಸ್ಕೈಮೆಟ್ ವೆದರ್ ಉಪಾಧ್ಯಕ್ಷ ಮಹೇಶ್ ಪಲಾವತ್ ಹೇಳಿದ್ದಾರೆ.

ಇದನ್ನೂ ಓದಿ : ಕೇಂದ್ರದಿಂದ ಶೀಘ್ರವೇ ‘ಒಂದು ರಾಷ್ಟ್ರ, ಒಂದು ಡಯಾಲಿಸಿಸ್ ಯೋಜನೆ': ಮನ್ಸುಖ್ ಮಾಂಡವಿಯಾ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News