ಮುಂದಿನ 3 ದಿನ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭರ್ಜರಿ ಮಳೆ: ಬಲವಾದ ಮೇಲ್ಮೈ ಗಾಳಿ ಜೊತೆ ಜಲಪ್ರವಾಹದ ಭೀತಿ

Karnataka Rain Update: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.

Written by - Bhavishya Shetty | Last Updated : Nov 1, 2023, 10:11 PM IST
    • ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ
    • ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ
    • ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ
ಮುಂದಿನ 3 ದಿನ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭರ್ಜರಿ ಮಳೆ: ಬಲವಾದ ಮೇಲ್ಮೈ ಗಾಳಿ ಜೊತೆ ಜಲಪ್ರವಾಹದ ಭೀತಿ title=
Karnataka Rain

Karnataka Rain Update: ರಾಜ್ಯದಲ್ಲಿ ಮತ್ತೆ ಮಳೆರಾಯ ಅಬ್ಬರಿಸಲಿದ್ದಾನೆ. ಮುಂದಿನ ಒಂದು ವಾರಗಳ ಕಾಲ ಮಳೆ ಇರಲಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಈ ಇಬ್ಬರು ವಿಶ್ವದ ಅತ್ಯಂತ ಶಕ್ತಿಶಾಲಿ ಬೌಲರ್’ಗಳು- ಶೋಯೆಬ್ ಅಖ್ತರ್ ಹೊಗಳಿದ್ದು ಯಾರನ್ನು ಗೊತ್ತಾ?

ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು,  ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಮಂಡ್ಯ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮತ್ತೊಂದೆಡೆ ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ನವೆಂಬರ್‌ 2ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಎಲ್ಲಾ ಭಾಗಗಳಲ್ಲೂ ಮಳೆರಾಯ ದರ್ಶನ ನೀಡಲಿದ್ದಾನೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಮಳೆಯಾಗುವ ಮುನ್ಸೂಚನೆಯಿದೆ.

ಇದನ್ನೂ ಓದಿ: ಶ್ರೀಲಂಕಾ ವಿರುದ್ಧದ ಪಂದ್ಯಕ್ಕಿಲ್ಲ ಹಾರ್ದಿಕ್ ಪಾಂಡ್ಯ, ಬದಲಿಯಾಗಿ ಈ ಆಟಗಾರ ಆಡಲಿದ್ದಾರೆ: ರೋಹಿತ್ ಶರ್ಮಾ ಹೇಳಿಕೆ

ರಾಜ್ಯ ರಾಜಧಾನಿ ಅಪ್ಡೇಟ್:

ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಜೊತೆಗೆ ಬಲವಾದ ಮೇಲ್ಮೈ ಗಾಳಿಯೂ ಬೀಸುವ ಸಾಧ್ಯತೆ ಇದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News