ಮುಂದಿನ 3 ದಿನ ಈ ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ಭರ್ಜರಿ ಮಳೆ: ಬಲವಾದ ಮೇಲ್ಮೈ ಗಾಳಿ ಜೊತೆ ಜಲಪ್ರವಾಹದ ಭೀತಿ
Karnataka Rain Update: ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.
Karnataka Rain Update: ರಾಜ್ಯದಲ್ಲಿ ಮತ್ತೆ ಮಳೆರಾಯ ಅಬ್ಬರಿಸಲಿದ್ದಾನೆ. ಮುಂದಿನ ಒಂದು ವಾರಗಳ ಕಾಲ ಮಳೆ ಇರಲಿದ್ದು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: ಟೀಂ ಇಂಡಿಯಾದ ಈ ಇಬ್ಬರು ವಿಶ್ವದ ಅತ್ಯಂತ ಶಕ್ತಿಶಾಲಿ ಬೌಲರ್’ಗಳು- ಶೋಯೆಬ್ ಅಖ್ತರ್ ಹೊಗಳಿದ್ದು ಯಾರನ್ನು ಗೊತ್ತಾ?
ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭರ್ಜರಿ ಮಳೆಯಾಗಲಿದೆ. ಇನ್ನುಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಶಿವಮೊಗ್ಗ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಚಿಕ್ಕಮಗಳೂರು, ಹಾಸನ, ರಾಮನಗರ, ತುಮಕೂರು, ಬೆಳಗಾವಿ, ಮಂಡ್ಯ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮತ್ತೊಂದೆಡೆ ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ನವೆಂಬರ್ 2ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಎಲ್ಲಾ ಭಾಗಗಳಲ್ಲೂ ಮಳೆರಾಯ ದರ್ಶನ ನೀಡಲಿದ್ದಾನೆ. ಉಳಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲ ಭಾಗಗಳಲ್ಲಿ ಮಾತ್ರ ಮಳೆಯಾಗುವ ಮುನ್ಸೂಚನೆಯಿದೆ.
ಇದನ್ನೂ ಓದಿ: ಶ್ರೀಲಂಕಾ ವಿರುದ್ಧದ ಪಂದ್ಯಕ್ಕಿಲ್ಲ ಹಾರ್ದಿಕ್ ಪಾಂಡ್ಯ, ಬದಲಿಯಾಗಿ ಈ ಆಟಗಾರ ಆಡಲಿದ್ದಾರೆ: ರೋಹಿತ್ ಶರ್ಮಾ ಹೇಳಿಕೆ
ರಾಜ್ಯ ರಾಜಧಾನಿ ಅಪ್ಡೇಟ್:
ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆ ಸುರಿಯಲಿದ್ದು, ಗುಡುಗು ಸಹಿತ ಮಳೆಯಾಗಲಿದೆ. ಜೊತೆಗೆ ಬಲವಾದ ಮೇಲ್ಮೈ ಗಾಳಿಯೂ ಬೀಸುವ ಸಾಧ್ಯತೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.