ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಸಮುದ್ರ ತೀರದ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಿದೆ.


COMMERCIAL BREAK
SCROLL TO CONTINUE READING

ಇದನ್ನು ಓದಿ: ಬೇಸಿಗೆಯಲ್ಲಿ ಈ ಹಣ್ಣು, ತರಕಾರಿ ಖರೀದಿಸುವ ವೇಳೆ ಆಗದಿರಲಿ ಇಂಥಹ ತಪ್ಪು ..!


ಒಂದೆರಡು ದಿನಗಳ ಕಾಲ ಬಿಡುವು ನೀಡಿದ್ದ ಮಳೆರಾಯನ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉ.ಕನ್ನಡ ಜಿಲ್ಲೆಗಳಿಗೆ ನಾಳೆ ಆರೆಂಜ್ ಅಲರ್ಟ್ ನೀಡಲಾಗಿದೆ. ಮೇ.18ರಂದು ಕರಾವಳಿಯಲ್ಲಿ ಭಾರೀ ಮಳೆ ಹಿನ್ನಲೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೇ.19ರಂದು ಕೂಡ ಆರೆಂಜ್ ಅಲರ್ಟ್ ಇರಲಿದೆ. ಮೇ.20ರಿಂದ ಮಳೆಯ ಪ್ರಮಾಣದಲ್ಲಿ ಇಳಿಕೆಯಾಗಲಿದ್ದು, ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.


ಅರೇಬಿಯನ್ ಸಮುದ್ರದಿಂದ ಭಾರತದ ಕಡೆಗೆ ಕಡಿಮೆ ಉಷ್ಣವಲಯದ ಮಟ್ಟದಲ್ಲಿ ಬಲವಾದ ಪಶ್ಚಿಮ ಗಾಳಿಯು ಬೀಸುತ್ತಿರುವ ಪರಿಣಾಮ ಕೇರಳದ ಹಲವಾರು ಭಾಗಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಇನ್ನು ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.


ಹವಾಮಾನ ಇಲಾಖೆಯು ಮಲಪ್ಪುರಂ, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳು ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.


ಕೇರಳದ ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ದಕ್ಷಿಣ ರಾಜ್ಯದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಕೊಟ್ಟಾಯಂನಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕಿ ಹರಿದಿದ್ದು, ವಿದ್ಯುತ್ ಕಂಬಗಳು ಧರೆಗುರುಳಿವೆ. 


ಇದನ್ನು ಓದಿ: WhatsApp ಹೊಸ ವೈಶಿಷ್ಟ್ಯ: ಲಿಂಕ್ ತೆರೆಯದೆಯೇ ಲಭ್ಯವಾಗುತ್ತೆ ಮಾಹಿತಿ


ಈ ಮಧ್ಯೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ಮುಂಗಾರು ಪೂರ್ವ ಸಿದ್ಧತೆ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.