ನವದೆಹಲಿ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಜನರಿಗೆ ಮಳೆ ತಂಪೆರೆಯುವ ನಿರೀಕ್ಷೆಯಿದೆ. ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಂದಾಜಿಸಿದೆ.
ಇದಲ್ಲದೆ, ದಕ್ಷಿಣ ಭಾರತದ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿದೆ.
Indian Meteorological Department: Heavy to very heavy rainfall expected today at isolated places likely over Nagaland, Manipur, Mizoram & Tripura. Heavy rainfall at isolated places likely over Assam,Meghalaya, Kerala and Gangetic West Bengal pic.twitter.com/XUofgMwQLx
— ANI (@ANI) June 7, 2019
ಅದೇ ಸಮಯದಲ್ಲಿ, ಅಸ್ಸಾಂ, ಮೇಘಾಲಯ, ಕೇರಳ ಮತ್ತು ಪಶ್ಚಿಮ ಬಂಗಾಳದ ಗಂಗಾ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.