Rain Alert: ರಾಜ್ಯದ ಈ ಭಾಗದಲ್ಲಿ 2 ದಿನಗಳ ಕಾಲ ಭಾರೀ ವರ್ಷಧಾರೆ: ಬಿರುಗಾಳಿ ಸಹಿತ ಪ್ರವಾಹದ ಎಚ್ಚರಿಕೆ
Karnataka Weather Update: ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ.
Today Karnataka Weather Alert 09-09-2023: ದೀರ್ಘಕಾಲದ ಒಣಹವೆಯ ನಂತರ ದಕ್ಷಿಣ ಕರ್ನಾಟಕದ ಹಲವೆಡೆ, ಮಧ್ಯ ಮತ್ತು ಉತ್ತರ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮಧ್ಯಮದಿಂದ ಭಾರೀ ಮಳೆ ದಾಖಲಾಗಿದ್ದು, ರೈತರಿಗೆ ಸ್ವಲ್ಪ ಸಮಾಧಾನ ತಂದಿದೆ.
ಇದನ್ನೂ ಓದಿ: ಇಂದಿನ ಅಡಿಕೆ ಧಾರಣೆ: ರಾಜ್ಯದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?
ಕೋಲಾರ ಮತ್ತು ತುಮಕೂರು ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಸಂಜೆಯ ವೇಳೆಗೆ ಮಳೆ ಸಿಂಚನವಾಗಿದೆ. ಆಗಸ್ಟ್’ನಲ್ಲಿ ಒಣಹವೆ ಅನುಭವದ ಬಳಿಕ ಕರ್ನಾಟಕಕ್ಕೆ ಮಳೆರಾಯನ ಆಗಮನವಾಗಿರುವುದು ಜನರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ.
ಇನ್ನು ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಪಾಕ್ ವಿರುದ್ಧ ಇತಿಹಾಸ ಸೃಷ್ಟಿಸಿದ ಹಾರ್ದಿಕ್-ಇಶಾನ್ ಜೋಡಿ
ಸದ್ಯ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ