ಆಂಧ್ರಪ್ರದೇಶ: ಮುಂದಿನ ಎರಡು ದಿನಗಳವರೆಗೆ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಛತ್ತೀಸ್‌ಗಢ, ಗುಜರಾತ್, ವಿದರ್ಭ, ಒಡಿಶಾ, ಮಧ್ಯ ಮಹಾರಾಷ್ಟ್ರ, ಕೊಂಕಣ ಮತ್ತು ಗೋವಾದ ಕೆಲವು ಪ್ರತ್ಯೇಕ ಭಾಗಗಳಲ್ಲಿ ಸಹ ದಿನವಿಡೀ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.


"ಛತ್ತೀಸ್‌ಗಢ, ಗುಜರಾತ್, ವಿದರ್ಭ, ಒಡಿಶಾ, ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ ಮತ್ತು ತೆಲಂಗಾಣದ ಪ್ರತ್ಯೇಕ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ಪೂರ್ವ ರಾಜಸ್ಥಾನ, ಮಧ್ಯಪ್ರದೇಶ, ಅಸ್ಸಾಂ ರಾಜ್ಯಗಳಲ್ಲಿನ ವಿವಿಧ ಭಾಗಗಳಲ್ಲೂ ಭಾರಿ ಮಳೆಯಾಗಿದೆ. ಇದಲ್ಲದೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಆಂಧ್ರಪ್ರದೇಶ, ಕರ್ನಾಟಕ ಮತ್ತು ಕೇರಳದ ಕರಾವಳಿ ಭಾಗಗಳಲ್ಲಿ” ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತನ್ನ ಅಖಿಲ ಭಾರತ ಹವಾಮಾನ ಎಚ್ಚರಿಕೆ ಬುಲೆಟಿನ್ ನಲ್ಲಿ ಹೇಳಿದೆ.


ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40-50 ಕಿ.ಮೀ.ಗೆ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮಧ್ಯ ಮತ್ತು ನೈಋತ್ಯ ಅರೇಬಿಯನ್ ಸಮುದ್ರ, ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಉಬ್ಬರವಿಳಿತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.


ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.