ನವದೆಹಲಿ: ಪೂರ್ವ ರಾಜಸ್ಥಾನ ಮತ್ತು ಪಶ್ಚಿಮ ಮಧ್ಯಪ್ರದೇಶದ ಕೆಲೆವೆಡೆ ಭಾನುವಾರ ಭಾರೀ ಮಳೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಶನಿವಾರ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಪೂರ್ವ ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಲಿದ್ದು, ಪಶ್ಚಿಮ ಮಧ್ಯಪ್ರದೇಶ ಮತ್ತು ಗುಜರಾತ್ ರಾಜ್ಯಗಳ ಪ್ರತ್ಯೇಕ ಸ್ಥಳಗಳಲ್ಲಿ ಸೋಮವಾರ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.


"ಪಶ್ಚಿಮ ಮಧ್ಯಪ್ರದೇಶ ಮತ್ತು ನೆರೆಯ ಪ್ರದೇಶಗಳಲ್ಲಿ ಮಂಗಳವಾರದಿಂದ ಗಮನಾರ್ಹವಾಗಿ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ. ಅಂತೆಯೇ ಮುಂದಿನ ಏಳು ದಿನಗಳವರೆಗೆ ಭೋಪಾಲ್‌ನಲ್ಲಿ ಮೋಡ ಕವಿದ ವಾತಾವರಣ ಅಥವಾ ಕೆಲವು ಮಳೆ ಅಥವಾ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ" ಎಂದು ಹವಾಮಾನ ಇಲಾಖೆ ತಿಳಿಸಿದೆ.