ಕರಾವಳಿ, ತಮಿಳುನಾಡು ಮತ್ತು ಪುದುಚೇರಿಗೆ ಮುಂದಿನ ವಾರದ ಆರಂಭದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಚೆನ್ನೈನ ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳ ಪ್ರಕಾರ, ಹಿಂದೂ ಮಹಾಸಾಗರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣದಿಂದ ತಮಿಳುನಾಡಿನ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ.


ಎಪ್ರಿಲ್ 29 ರಿಂದ ತಮಿಳುನಾಡಿನ ಕರಾವಳಿ ಭಾಗದಲ್ಲಿ, ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.