ಲಕ್ನೋ: ದೇಶಾದ್ಯಂತ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ಮಧ್ಯೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಗೋಡೆ ಕುಸಿದು ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.  ಹಜರತ್‌ಗಂಜ್‌ನಲ್ಲಿ ಮನೆಯ ಗೋಡೆ ಕುಸಿದು ಬಿದ್ದಿದ್ದರಿಂದ ಮೂವರು ಮಕ್ಕಳು ಸೇರಿದಂತೆ ಒಂಬತ್ತು ಮನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಲಭ್ಯವಿರುವ ಮಾಹಿತಿ ಪ್ರಕಾರ ಸ್ಥಳದಿಂದ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  


COMMERCIAL BREAK
SCROLL TO CONTINUE READING

ಸಿಎಂಒ ಪ್ರಕಾರ, ಘಟನೆಯಲ್ಲಿ ಹತ್ತು ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ ನಾಲ್ವರು ಮಹಿಳೆಯರು, ಮೂವರು ಪುರುಷರು ಮತ್ತು ಮೂವರು ಮಕ್ಕಳು ಸೇರಿದ್ದಾರೆ. ಇವರೆಲ್ಲರೂ ಝಾನ್ಸಿ ಜಿಲ್ಲೆಯ ಉಲ್ಡಾನ್ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಮೃತರ ಹೆಸರು ಭಾನು ಪವನ್ ದೇವಿ, ಪಪ್ಪು, ಪ್ರದೀಪ್, ರೇಷ್ಮಾ, ನೈನಾ, ಧರ್ಮೇಂದ್ರ, ಚಂದಾ, ಎರಡು ವರ್ಷದ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. 


ಇದನ್ನೂ ಓದಿ- CUET UG ಫಲಿತಾಂಶ ಪ್ರಕಟ: ಈ ನೇರ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ


ಈ ಮಧ್ಯೆ, ಉನ್ನಾವೋದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ.  ಉನ್ನಾವ್‌ನಲ್ಲಿ ತಡರಾತ್ರಿ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ, ಒಬ್ಬರು ಗಾಯಗೊಂಡಿದ್ದಾರೆ. ಮೃತರಲ್ಲಿ 20 ವರ್ಷದ ಮಹಿಳೆ, 4 ವರ್ಷ ಮತ್ತು 6 ವರ್ಷದ ಮೂವರು ಮಕ್ಕಳು ಸೇರಿದ್ದಾರೆ ಎಂದು ತಿಳಿದುಬಂದಿದೆ.


ಘಟನೆ ಬಗ್ಗೆ ಮಾಹಿತಿ ಪಡೆದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಇದರೊಂದಿಗೆ ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡಲು ಆದೇಶಿಸಿದ್ದಾರೆ. 


ಇದನ್ನೂ ಓದಿ- 2024 ರ ಲೋಕಸಭೆ ಚುನಾವಣೆಗೆ ಮುನ್ನ ಸಿಎಂ ನಿತೀಶ್ ಕುಮಾರ್ ಭರ್ಜರಿ ಘೋಷಣೆ


ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಿಎಂ ಯೋಗಿ ಅವರು ಡಿಎಂ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.