ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ; ಉತ್ತರ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ

ದೆಹಲಿ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ಬಿಹಾರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

Last Updated : Jul 10, 2019, 04:49 PM IST
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ; ಉತ್ತರ ಭಾರತದಲ್ಲಿ ಭಾರಿ ಮಳೆ ಸಾಧ್ಯತೆ

ನವದೆಹಲಿ: ಉತ್ತರ ಭಾರತದ ದೆಹಲಿ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಹರಿಯಾಣ, ಚಂಡೀಗಢ, ಬಿಹಾರ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದ ಉಪ ಹಿಮಾಲಯ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಧ್ಯಪ್ರದೇಶ, ಮಹಾರಾಷ್ಟ್ರ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ಕೊಂಕಣ ಗೋವಾ, ಕರಾವಳಿ ಕರ್ನಾಟಕ, ಲಕ್ಷದ್ವೀಪ, ಕೇರಳ, ತಮಿಳುನಾಡು ಮತ್ತು ಪುದುಚೇರಿಗಳಲ್ಲಿಯೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ನಿರಂತರ ಮತ್ತು ಭಾರಿ ಮಳೆಯಿಂದಾಗಿ ಅಸ್ಸಾಂನಲ್ಲಿ ಪ್ರವಾಹದಂತಹ ಪರಿಸ್ಥಿತಿಯನ್ನು ನಿರ್ಮಾಣವಾಗಿದ್ದು, ರಾಜ್ಯದ ಎಂಟು ಜಿಲ್ಲೆಗಳಲ್ಲಿ 62,000ಕ್ಕೂ ಹೆಚ್ಚು ಜನರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೋರ್ಹತ್‌ನ ನಿಮತಿ ಘಾಟ್‌ನಲ್ಲಿ ಬ್ರಹ್ಮಪುತ್ರ ನದಿ ಅಪಾಯದ ಮಟ್ಟವನ್ನೂ ದಾಟಿ ಹರಿಯುತ್ತಿದೆ. 

More Stories

Trending News