ಬೆಂಗಳೂರು/ತಿರುವನಂತಪುರಂ: ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ, ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೇ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮಂಗಳವಾರ ಕಣ್ಣೂರು ಮತ್ತು ಕಾಸಗೋಡಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಇದಲ್ಲದೆ ಕೋಜಿಕೋಡ್, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಕೇರಳ ಮತ್ತು ಕರ್ನಾಟಕ ಕರಾವಳಿ, ದಕ್ಷಿಣ ತಮಿಳುನಾಡು ಮತ್ತು ಲಕ್ಷದ್ವೀಪ ಪ್ರದೇಶದ ಉದ್ದಕ್ಕೂ ನೈಋತ್ಯ ದಿಕ್ಕಿನಿಂದ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತದೆ ಎಂದು ಐಎಂಡಿ ಹೇಳಿದೆ. ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ, ಕೇರಳ ಕರಾವಳಿ ಭಾಗ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.


ಕರಾವಳಿ ಭಾಗಗಲ್ಲಿ ಮುಂದಿನ ಕೆಲವು ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.


ಜುಲೈ 26 ರ ಶುಕ್ರವಾರದವರೆಗೆ ಇದೇ ರೀತಿಯ ಹವಾಮಾನ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದ್ದು, ಕಣ್ಣೂರು, ಕಾಸರ್‌ಗೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ