ನವದೆಹಲಿ: ರಸ್ತೆ ಅಪಘಾತದಲ್ಲಿ ಗಾಯಗೊಂಡವರ ಜೀವ ಉಳಿಸಲು ಪ್ರಧಾನಿ ಮೋದಿ ಸರ್ಕಾರ ದೊಡ್ಡ ಉಪಕ್ರಮ(Good Samaritan scheme)ವನ್ನು ಕೈಗೊಂಡಿದೆ. ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು 1 ಗಂಟೆಯೊಳಗೆ ಆಸ್ಪತ್ರೆಗೆ ಕರೆದೊಯ್ಯುವ ವ್ಯಕ್ತಿಗೆ 5 ಸಾವಿರ ರೂ. ನಗದು ನೀಡುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೇಳಿದೆ.
ಇದಕ್ಕಾಗಿ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರಧಾನ ಕಾರ್ಯದರ್ಶಿಗಳು ಮತ್ತು ಸಾರಿಗೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ. ಈ ಪತ್ರದಲ್ಲಿ ಈ ಯೋಜನೆ ಅಕ್ಟೋಬರ್ 15, 2021 ರಿಂದ ಮಾರ್ಚ್ 31, 2026 ರವರೆಗೆ ಜಾರಿಯಲ್ಲಿರುತ್ತದೆ ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ: Azadi Ka Amrit Mahotsav: 75 ಸಾವಿರ ಫಲಾನುಭವಿಗಳಿಗೆ ಮನೆ ಉಡುಗೊರೆ ನೀಡಿದ PM Narendra Modi
ಸಹಾಯಕರಿಗೆ ಬಹುಮಾನ ನೀಡುವ ಯೋಜನೆ
Ministry of Road Transport and Highways says it has launched scheme for 'Good Samaritans' under which cash award of Rs 5,000 will be given to those who save the life of a road accident victim by rushing him/her to hospital within 'golden hour' of mishap
— Press Trust of India (@PTI_News) October 4, 2021
ಸಚಿವಾಲಯವು ಸೋಮವಾರ ‘ಸಹಾಯಕರಿಗೆ ಬಹುಮಾನ ನೀಡುವ ಯೋಜನೆ’(Scheme for awarding noble helpers)ಗಾಗಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ತುರ್ತು ಸಂದರ್ಭಗಳಲ್ಲಿ ರಸ್ತೆ ಅಪಘಾತ(Road Accidents)ದ ಸಂತ್ರಸ್ತರಿಗೆ ಸಹಾಯ ಮಾಡಲು ಸಾಮಾನ್ಯ ಜನರನ್ನು ಪ್ರೇರೇಪಿಸುವುದು ಈ ಯೋಜನೆಯ ಉದ್ದೇಶವಾಗಿದೆ ಎಂದು ಸಚಿವಾಲಯ ಹೇಳಿದೆ. ನಗದು ಬಹುಮಾನದೊಂದಿಗೆ ಪ್ರಮಾಣಪತ್ರವನ್ನು ಸಹ ನೀಡಲಾಗುತ್ತದೆ. ಈ ಪ್ರಶಸ್ತಿಯ ಹೊರತಾಗಿ ರಾಷ್ಟ್ರ ಮಟ್ಟದಲ್ಲಿ 10 ಅತ್ಯಂತ ಉದಾತ್ತ ಸಹಾಯಕರಿಗೆ ತಲಾ 1 ಲಕ್ಷ ರೂ.ಗಳ ಬಹುಮಾನವನ್ನು ನೀಡಲಾಗುವುದು ಎಂದು ಸಚಿವಾಲಯ ತಿಳಿಸಿದೆ.
ರಸ್ತೆ ಅಪಘಾತಕ್ಕೆ ಪ್ರತಿವರ್ಷ 1.5 ಲಕ್ಷ ಜನರು ಬಲಿ
ಅಂಕಿಅಂಶಗಳ ಪ್ರಕಾರ, ಪ್ರತಿ ವರ್ಷ ದೇಶದಲ್ಲಿ ಸುಮಾರು 5 ಲಕ್ಷ ರಸ್ತೆ ಅಪಘಾತ(Road Accidents in India)ಗಳು ಸಂಭವಿಸುತ್ತವೆ. ಇದರಲ್ಲಿ ಸುಮಾರು 1.5 ಲಕ್ಷ ಜನರು ಸಾವನ್ನಪ್ಪುತ್ತಾರೆ. ಆದರೆ ಇದರಲ್ಲಿ 4.5 ಲಕ್ಷಕ್ಕೂ ಹೆಚ್ಚು ಜನರು ಅಪಘಾತ ಸಂಭವಿಸಿದ ಬಳಿಕ ರಸ್ತೆಯಲ್ಲಿಯೇ ಕೊನೆಯುಸಿರೆಳೆಯುತ್ತಾರೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವವರ ಬಗ್ಗೆ ಸರ್ಕಾರ ತುಂಬಾ ಕಾಳಜಿ ಹೊಂದಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವ ಜನರ ಸಂಖ್ಯೆಯನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳುವಂತೆ ಎಲ್ಲಾ ರಾಜ್ಯಗಳಿಗೂ ತಿಳಿಸಿದ್ದಾರೆ.
2025 ರ ವೇಳೆಗೆ ರಸ್ತೆ ಅಪಘಾತಗಳಿಂದ ಉಂಟಾಗುವ ಸಾವುಗಳನ್ನು ಶೇ.50ರಷ್ಟು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ. ರಸ್ತೆ ಅಪಘಾತಗಳ ಸಾವಿನಿಂದ ಅಪಾಯಕಾರಿ ಸನ್ನಿವೇಶ ಸೃಷ್ಟಿಯಾಗುತ್ತಿದೆ. ರಸ್ತೆ ಅಪಘಾತಗಳ ವಿಷಯದಲ್ಲಿ ಭಾರತವು ಮೊದಲ ಸ್ಥಾನದಲ್ಲಿದ್ದು, ಅಮೆರಿಕ ಮತ್ತು ಚೀನಾಕ್ಕಿಂತಲೂ ಮುಂದಿದೆ ಎಂದು ಅವರು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.