ಆಂಧ್ರಪ್ರದೇಶಕ್ಕೆ ಪೆಥೈ ಚಂಡಮಾರುತ ಆತಂಕ; 9 ಜಿಲ್ಲೆಗಳಲ್ಲಿ ಹೈ ಅಲರ್ಟ್

ಆಂಧ್ರದ ಕಾಕಿನಾಡದೆಡೆಗೆ ಗಂಟೆಗೆ 70 ರಿಂದ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ.

Last Updated : Dec 17, 2018, 11:00 AM IST
ಆಂಧ್ರಪ್ರದೇಶಕ್ಕೆ ಪೆಥೈ ಚಂಡಮಾರುತ ಆತಂಕ; 9 ಜಿಲ್ಲೆಗಳಲ್ಲಿ ಹೈ ಅಲರ್ಟ್ title=

ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಪೆಥೈ ಚಂಡಮಾರುತದ ಮುನ್ಸೂಚನೆ ನೀಡುತ್ತಿದ್ದಂತೆಯೇ ಆಂಧ್ರಪ್ರದೇಶದ 9 ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಭಾಗದಲ್ಲಿ ಮಳೆಯಾಗಲಿದ್ದು ಹಲವು ಕಡೆ ಭೂ ಕುಸಿತದ ಎಚ್ಚರಿಕೆ ನೀಡಿದೆ. ಈ ಚಂಡಮಾರುತಕ್ಕೆ ಪೆಥೈ ಎನ್ನಲಾಗಿದ್ದು, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರದ ಕಾಕಿನಾಡದೆಡೆಗೆ ಗಂಟೆಗೆ 70 ರಿಂದ 80 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಕೃಷ್ಣ ಮತ್ತು ಗುಂಟೂರು, ಪುದುಚೇರಿ ಪ್ರದೇಶಗಳಿಗೆ ಚಂಡಮಾರುತ ತೀವ್ರ ಹಾನು ಉಂಟುಮಾಡುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಭಾಗದ ಜಿಲ್ಲೆಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಬೀಡುಬಿಟ್ಟಿವೆ.

ಅಷ್ಟೇ ಅಲ್ಲದೆ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳಿಗೆ ಕಾರ್ಯಪ್ರವೃತ್ತರಾಗುವಂತೆ ಮತ್ತು ಎಚ್ಚರಿಕೆ ವಹಿಸುವಂತೆ ಹೇಳಿದ್ದಾರೆ. 
 

Trending News