ನವದೆಹಲಿ: ಆಗಸ್ಟ್ 15ರಂದು ನಡೆಯಲಿರುವ 75ನೇ ಸ್ವಾತಂತ್ರ್ಯ ದಿನಾಚರಣೆಗೆ ರಾಷ್ಟ್ರ ರಾಜಧಾನಿಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಭಯೋತ್ಪಾದಕರಿಂದ ಡ್ರೋನ್ ದಾಳಿ ನಡೆಯುವ ಭೀತಿ ಎದುರಾಗಿದ್ದು,  ದೆಹಲಿಯ ಪ್ರಮುಖ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಿಲಾಗಿದೆ.


COMMERCIAL BREAK
SCROLL TO CONTINUE READING

ಜಮ್ಮ ವಾಯುನೆಲೆ ಮೇಲೆ ಡ್ರೋನ್ ದಾಳಿ(Drone Attack) ನಡೆಸಿದ ಬಳಿಕ ಉಗ್ರರ ಕರಿನೆರಳು ಇದೀಗ ಸ್ವಾತಂತ್ರ್ಯೋತ್ಸವದ ಮೇಲೆ ಬಿದ್ದಿದೆ. ಭದ್ರತಾ ಸಂಸ್ಥೆಗಳಿಗೆ ಸಿಕ್ಕಿರುವ ಮಾಹಿತಿಯ ಪ್ರಕಾರ, ಪಾಕ್ ಮೂಲದ ಭಯೋತ್ಪಾದಕ ಸಂಘಟನೆಗಳು ಸ್ಫೋಟಕ ತುಂಬಿದ ಡ್ರೋನ್‌ಗಳನ್ನು ಬಳಸಿ ಭಯೋತ್ಪಾದಕ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸಂಸತ್ತಿನ ಮುಂಗಾರು ಅಧಿವೇಶನದ ಮೇಲೆ ಉಗ್ರರು ಕಣ್ಣಿಟ್ಟಿದ್ದು, ದಾಳಿ ನಡೆಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆಗೆ ಅಡ್ಡಿಪಡಿಸಲು ಪ್ರಯತ್ನಿಸಬಹುದು ಎಂದು ಭದ್ರತಾ ಸಂಸ್ಥೆಗಳು ತಿಳಿಸಿವೆ.


ಇದನ್ನೂ ಓದಿ: ಸಂಸತ್ತಿನ ಹೊರಗೆ ರೈತರ ಪ್ರತಿಭಟನೆಗೆ ಅವಕಾಶ ಕಲ್ಪಿಸದ ದೆಹಲಿ ಪೊಲೀಸರು


ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370(Article 370) ಅನ್ನು ತೆಗೆದುಹಾಕಿರುವ ಕಾರಣ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ದೆಹಲಿ ಮೇಲೆ ದಾಳಿ ನಡೆಸಬಹುದು ಎಂದು ಭದ್ರತಾ ಸಂಸ್ಥೆಗಳು ದೆಹಲಿ ಪೊಲೀಸರಿಗೆ ಆಗಸ್ಟ್ 5ರಂದು ಎಚ್ಚರಿಕೆ ನೀಡಿದ್ದರು. ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸಲು ಉಗ್ರರು ದೊಡ್ಡ ಪಿತೂರಿ ನಡೆಸುತ್ತಿದ್ದಾರೆಂಬ ಆಘಾತಕಾರಿ ಮಾಹಿತಿ ದೊರೆತಿದೆ.


ಜಮ್ಮುವಿನ ಐಎಎಫ್ ನಿಲ್ದಾಣದ ಮೇಲೆ ಇತ್ತೀಚೆಗೆ ನಡೆದ ಡ್ರೋನ್ ದಾಳಿ(Drone Attack) ಹಿನ್ನೆಲೆ ದೆಹಲಿಯ ಪೊಲೀಸ್ ಆಯುಕ್ತರಾದ ಬಾಲಾಜಿ ಶ್ರೀವಾಸ್ತವ್, ದೆಹಲಿಯ ಎಲ್ಲ ಉಪ ಪೊಲೀಸ್ ಆಯುಕ್ತರಿಗೆ(DCP), ಜಂಟಿ ಪೊಲೀಸ್ ಆಯುಕ್ತರು( ಮತ್ತು ಇತರ ಗುಪ್ತಚರ ಘಟಕದ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸಿ ಮೇಲ್ವಿಚಾರಣೆ ನಡೆಸುವಂತೆ ನಿರ್ದೇಶಿಸಿದ್ದರು. ಎಲ್ಲ ರಾಜ್ಯಗಳಲ್ಲಿಯೂ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ.   


ಪೊಲೀಸ್ ಕಂಟ್ರೋಲ್ ರೂಂಗೆ ಮಾಡುವ ಎಲ್ಲ ಕರೆಗಳು ಅಥವಾ ನಗರದಲ್ಲಿ ಬಳಕೆ ಮಾಡುವ ಡ್ರೋನ್ ಬಗ್ಗೆ ಮಾಹಿತಿ ಪಡೆದಕೊಂಡು ತನಿಖೆ ನಡೆಸುವಂತೆ ಸೂಚಿಸಲಾಗಿದೆ. ದೆಹಲಿ ಪೊಲೀಸರು ವಿಶೇಷ ನಿಯಂತ್ರಣ ಕೊಠಡಿಯನ್ನು ಸಹ ರಚಿಸಿದ್ದಾರೆ. ಈ ಬಾರಿ ಐತಿಹಾಸಿಕ ಕೆಂಪು ಕೋಟೆಯಲ್ಲಿ 4 ಆಂಟಿ-ಡ್ರೋನ್ ವ್ಯವಸ್ಥೆಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಮೊದಲ ಬಾರಿಗೆ ದೆಹಲಿ ಪೊಲೀಸ್(Delhi Police) ಮತ್ತು ಇತರ ಭದ್ರತಾ ಸಂಸ್ಥೆಗಳಿಗೆ ಡ್ರೋನ್ ದಾಳಿ ಎದುರಿಸಲು ವಿಶೇಷ ತರಬೇತಿ ನೀಡಲಾಗುತ್ತಿದೆ.


ಇದನ್ನೂ ಓದಿ: Viral Video: ಟ್ರೈನ್ ಕೆಳಗಡೆ ಬಂದ 70 ವರ್ಷದ ವೃದ್ಧ, ಮುಂದೇನಾಯ್ತು ನೀವೇ ನೋಡಿ


ಡ್ರೋನ್ ದಾಳಿ ಬೆದರಿಕೆ ಮಧ್ಯೆ ಮಹಿಳೆಯರು ಮತ್ತು ಮಕ್ಕಳನ್ನು ರಕ್ಷಣೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಬಾಲಾಜಿ ಶ್ರೀವಾಸ್ತವ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಮಹಿಳೆಯರ ಸುರಕ್ಷತೆ ಮತ್ತು ಮಕ್ಕಳ ಮೇಲಿನ ಅಪರಾಧ ತಡೆಯಲು ಕಠಿಣ ಕ್ರಮಕೈಗೊಳ್ಳಬೇಕೆಂದು ದೆಹಲಿ ಪೊಲೀಸ್ ಮುಖ್ಯಸ್ಥರು ನಿರ್ದೇಶನ ನೀಡಿದ್ದಾರೆ.


ಆಗಸ್ಟ್ 15ರಂದು ಕೆಂಪುಕೋಟೆಯಲ್ಲಿ ನಡೆಯುವ  ಸ್ವಾತಂತ್ರ್ಯ ದಿನಾಚರಣೆ(Independence Day) ಸಮಾರಂಭದಲ್ಲಿ ಪಾಲ್ಗೋಳ್ಳುವ ಪ್ರಧಾನಿ ಮೋದಿಯವರ ಮೇಲೆ ದ್ರೋನ್ ಮೂಲಕ ದಾಳಿ ನಡೆಸಲು ಉಗ್ರರ ತಂಡವೊಂದು ಸಂಚು ನಡೆಸುತ್ತಿದೆ ಎಂದು ಈ ಹಿಂದೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಹಿನ್ನೆಲೆ ರಾಷ್ಟ್ರ ರಾಜಧಾನಿಯ ಪ್ರಮುಖ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.