ಮುಂಬೈ : ವಾಣಿಜ್ಯ ನಗರಿ ಮುಂಬೈನಲ್ಲಿ ಇದೇ 13 ಮತ್ತು 14ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ 'ಹೈ ಅಲರ್ಟ್' ಘೋಷಣೆ ಮಾಡಲಾಗಿದೆ.
ನಿಯಂತ್ರಣ ಕೊಠಡಿಗಳು, ವಿಪತ್ತು ನಿರ್ವಹಣಾ(Disaster Management) ಕಾರ್ಯ ಕೈಗೊಳ್ಳುವ ಏಜೆನ್ಸಿಗಳಿಗೆ ಸನ್ನದ್ಧವಾಗಿರುವಂತೆ ಸೂಚಿಸಲಾಗಿದೆ. ಬೆಸ್ಟ್, ಅದಾನಿ ಸೇರಿದಂತೆ ವಿದ್ಯುತ್ ಪೂರೈಸುವ ಸಂಸ್ಥೆಗಳು, ಕರಾವಳಿ ಕಾವಲು ಪಡೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ಗಳಿಗೂ ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ :WhatsApp:ವಾಟ್ಸಾಪ್‌ನಲ್ಲಿ ನಿಮ್ಮ ರಹಸ್ಯ ಚಾಟ್ ಅನ್ನು ಮರೆಮಾಡಬೇಕೆ? ಈ ಟ್ರಿಕ್ ಒಮ್ಮೆ ಟ್ರೈ ಮಾಡಿ
ಆರು ಕಂಟ್ರೋಲ್ ರೂಂಗಳಲ್ಲಿ ಅಗ್ನಿ ಶಾಮಕ ದಳ(Fire department)ದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆಯಿರುವ ನಗರದ ಹಲವು ಭಾಗಗಳಲ್ಲಿ ಪಂಪಿಂಗ್ ಕೇಂದ್ರಗಳನ್ನು ಅಳವಡಿಸಲಾಗಿದೆ. ಸಮುದ್ರ ತೀರಗಳಿಗೆ ಭೇಟಿ ನೀಡದಂತೆ ಜನರಿಗೆ ಸೂಚಿಸಲಾಗಿದೆ. 24 ವಾರ್ಡ್‌ಗಳಲ್ಲಿರುವ ಪಾಲಿಕೆಯ ಶಾಲೆಗಳಲ್ಲಿ ತಾತ್ಕಾಲಿಕ ಆಶ್ರಯ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಇದನ್ನೂ ಓದಿ : ಬ್ಯಾಂಕ್ ಗ್ರಾಹಕರ ಗಮನಕ್ಕೆ : 'ATM' ಗೆ ಸಂಬಂಧಿಸಿದಂತೆ ಬದಲಾಗಲಿವೆ ಈ 5 ನಿಯಮಗಳು!
ಕ್ರಾಂತಿ ನಗರದ ಬಳಿಯಿರುವ ಮಿಠಿ ನದಿಯ ದಡದಲ್ಲಿ ಎನ್‌ಡಿಆರ್‌ಎಫ್ ತಂಡ(NDRF)ವನ್ನು ನಿಯೋಜನೆ ಮಾಡಲಾಗಿದೆ. ಒಂದು ವೇಳೆ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದರೆ, ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು. ಇದಕ್ಕೆ ಬೇಕಾಗಿರುವ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ಇದನ್ನೂ ಓದಿ : SBI- ಕರೋನಾ ಚಿಕಿತ್ಸೆಗಾಗಿ ಎಸ್‌ಬಿಐ ಗ್ರಾಹಕರಿಗೆ ಎದುರಾಗಲ್ಲ ಹಣದ ಸಮಸ್ಯೆ, ಬ್ಯಾಂಕ್ ನೀಡುತ್ತಿದೆ ಅಗ್ಗದ ಸಾಲ ಸೌಲಭ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.